ಲಾಲೂ ಪ್ರಸಾದ್​ ಮನೆಯಲ್ಲಿ ಮದುವೆ ಸಂಭ್ರಮ; ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತೇಜಸ್ವಿ ಯಾದವ್

Tejashwi Yadav Engagement: ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ರಾಚೆಲ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಲಾಲೂ ಪ್ರಸಾದ್​ ಮನೆಯಲ್ಲಿ ಮದುವೆ ಸಂಭ್ರಮ; ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತೇಜಸ್ವಿ ಯಾದವ್
ತೇಜಸ್ವಿ ಯಾದವ್ ಅವರ ನಿಶ್ಚಿತಾರ್ಥದ ಫೋಟೋ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 11, 2021 | 9:36 PM

ನವದೆಹಲಿ: ಆರ್​​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಮಗ ತೇಜಸ್ವಿ ಯಾದವ್ (Tejaswi Yadav) ಸದ್ದಿಲ್ಲದಂತೆ ಇಂದು ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಅವರು ಮದುವೆಯಾಗಲಿದ್ದು, ತಮ್ಮ ಮನದನ್ನೆಯ ಜೊತೆ ನಿಂತು ನಿಶ್ಚಿತಾರ್ಥ ಸಮಾರಂಭದಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ಫೋಟೋಗಳು ವೈರಲ್ ಆಗಿವೆ. ಇಂದು ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡೂ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಪಾಲ್ಗೊಂಡಿದ್ದರು.

ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ರಾಚೆಲ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ದೆಹಲಿಯ ಸೈನಿಕ್ ಫಾರ್ಮ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್, ರಾಜ್ಯಸಭಾ ಸಂಸದೆ ಮಿಸಾ ಭಾರತಿ ಇತರರು ಸೇರಿದಂತೆ ಉನ್ನತ ರಾಜಕೀಯ ನಾಯಕರು ಉಪಸ್ಥಿತರಿದ್ದರು.

ತೇಜಸ್ವಿ ಯಾದವ್ ಮತ್ತು ರಾಚೆಲ್ 7 ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದರು. ನಿಶ್ಚಿತಾರ್ಥ ಸಮಾರಂಭಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಸ್ಥಳದ ಹೊರಗೆ ಹಲವಾರು ಬೌನ್ಸರ್‌ಗಳು ನೆಲೆಸಿದ್ದು, ಎಲ್ಲಾ ಗೇಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿತ್ತು. ಸಮಾರಂಭಕ್ಕೆ ಯಾವುದೇ ಮಾಧ್ಯಮದ ಸಿಬ್ಬಂದಿಗೆ ಅವಕಾಶವಿರಲಿಲ್ಲ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಬಿಹಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ರಾಘೋಪುರ ಕ್ಷೇತ್ರದ ಶಾಸಕರಾಗಿದ್ದಾರೆ. ತೇಜಸ್ವಿ ಯಾದವ್ 2015ರಿಂದ 2017ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದರು. 32 ವರ್ಷದ ತೇಜಸ್ವಿ ಯಾದವ್ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಕಿರಿಯ ಮಗ. ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್ ಮೇವು ಹಗರಣದ ಆರೋಪಿಯಾಗಿದ್ದು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ತೇಜಸ್ವಿ ಯಾದವ್ ಅವರನ್ನು ಮದುವೆಯಾಗುವ ಯುವತಿ ರಾಜೇಶ್ವರಿ ಹರಿಯಾಣದವರು ಎನ್ನಲಾಗಿದೆ. ಅವರು ಕೆಲಕಾಲ ಪಾಟ್ನಾದಲ್ಲಿ ತನ್ನ ಶಾಲಾ ಶಿಕ್ಷಣವನ್ನು ಪಡೆದಿದ್ದರು. 2020ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಮತ್ತು ತಂದೆಗೆ ಜಾಮೀನು ಸಿಕ್ಕ ನಂತರ ಮದುವೆಯಾಗುವುದಾಗಿ ತೇಜಸ್ವಿ ಯಾದವ್ ಈ ಹಿಂದೆಯೇ ಸುಳಿವು ನೀಡಿದ್ದರು. ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಬಿಹಾರದ ಮಾಜಿ ಮುಖ್ಯಮಂತ್ರಿ ದರೋಗಾ ಪ್ರಸಾದ್ ರಾಯ್ ಅವರ ಮೊಮ್ಮಗಳು ಐಶ್ವರ್ಯಾ ರೈ ಅವರನ್ನು ಮೇ 2018ರಲ್ಲಿ ವಿವಾಹವಾಗಿದ್ದರು. ಆದರೆ, ಆರು ತಿಂಗಳೊಳಗೆ ಅವರ ಸಂಬಂಧ ಹದಗೆಟ್ಟಿದ್ದರಿಂದ ವಿಚ್ಛೇದನ ಪಡೆದಿದ್ದರು.

ಇದನ್ನೂ ಓದಿ: Tejashwi Yadav: ತೇಜಸ್ವಿ ಯಾದವ್​ಗೆ ನಾಳೆ ನಿಶ್ಚಿತಾರ್ಥ; ಸೊಸೆಯ ಬಗ್ಗೆ ಗುಟ್ಟು ಬಿಟ್ಟುಕೊಡದ ಲಾಲೂ ಪ್ರಸಾದ್

ಬಿಹಾರದಲ್ಲಿ ಜಾತಿ ಗಣತಿ ಬೇಕು ಎಂದು ಒತ್ತಾಯಿಸಿದ ನಿತೀಶ್ ಕುಮಾರ್; ದೇಶದಾದ್ಯಂತ ಬೇಕು ಎಂದ ತೇಜಸ್ವಿ ಯಾದವ್

Published On - 5:41 pm, Thu, 9 December 21