Tejashwi Yadav Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಾಲೂ ಪ್ರಸಾದ್​ ಮಗ; ಬಹುಕಾಲದ ಗೆಳತಿಯನ್ನು ಮದುವೆಯಾದ ತೇಜಸ್ವಿ ಯಾದವ್

ದೆಹಲಿಯಲ್ಲಿ ನಿನ್ನೆ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಹರಿಯಾಣದ ರಾಚೆಲ್ ಗೋಡಿನ್ಹೋ ಅವರನ್ನು ಮದುವೆಯಾಗಿದ್ದಾರೆ.

Tejashwi Yadav Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಾಲೂ ಪ್ರಸಾದ್​ ಮಗ; ಬಹುಕಾಲದ ಗೆಳತಿಯನ್ನು ಮದುವೆಯಾದ ತೇಜಸ್ವಿ ಯಾದವ್
ತೇಜಸ್ವಿ ಯಾದವ್ ದಂಪತಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 11, 2021 | 9:40 PM

ನವದೆಹಲಿ: ಆರ್​​ಜೆಡಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಮಗ ತೇಜಸ್ವಿ ಯಾದವ್ (Tejaswi Yadav) ಹರಿಯಾಣದ ತಮ್ಮ ಬಹುಕಾಲದ ಗೆಳತಿಯೊಂದಿಗೆ ವಿವಾಹವಾಗಿದ್ದಾರೆ. ಸರಳವಾಗಿ ನಡೆದ ಸಮಾರಂಭದಲ್ಲಿ ಎರಡೂ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಪಾಲ್ಗೊಂಡಿದ್ದರು. ತೇಜಸ್ವಿ ಯಾದವ್ ಅವರು ಅಂತರ್ ಧರ್ಮೀಯ ಯುವತಿಯಾದ ರಾಚೆಲ್ ಗೋಡಿನ್ಹೋ ಎಂಬುವವರನ್ನು ಹಿಂದೂ ಧರ್ಮದ ಪ್ರಕಾರ ಮದುವೆಯಾಗಿದ್ದಾರೆ.

ದೆಹಲಿಯಲ್ಲಿ ನಿನ್ನೆ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ರಾಚೆಲ್ ಗೋಡಿನ್ಹೋ ಅವರನ್ನು ಮದುವೆಯಾಗಿದ್ದಾರೆ. ದೆಹಲಿಯ ಸೈನಿಕ್ ಫಾರ್ಮ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್, ರಾಜ್ಯಸಭಾ ಸಂಸದೆ ಮಿಸಾ ಭಾರತಿ ಇತರರು ಸೇರಿದಂತೆ ಉನ್ನತ ರಾಜಕೀಯ ನಾಯಕರು ಉಪಸ್ಥಿತರಿದ್ದರು. ಅವರಿಬ್ಬರಿಗೆ ತೇಜಸ್ವಿ ಯಾದವ್ ಅವರ ಸೋದರಿ ರೋಹಿಣಿ ಆಚಾರ್ಯ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

ತೇಜಸ್ವಿ ಯಾದವ್ ಅವರ ಮದುವೆ ಸಮಾರಂಭಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಸಮಾರಂಭಕ್ಕೆ ಯಾವುದೇ ಮಾಧ್ಯಮದ ಸಿಬ್ಬಂದಿಗೆ ಅವಕಾಶವಿರಲಿಲ್ಲ. ರೋಹಿಣಿ ಆಚಾರ್ಯ ಅವರು ಟ್ವೀಟ್ ಮಾಡಿರುವ ಫೋಟೋದಲ್ಲಿ ತೇಜಸ್ವಿ ಯಾದವ್ ಹಾಗೂ ರಾಚೆಲ್ ಮದುವೆಯ ಶಾಸ್ತ್ರಗಳನ್ನು ನಡೆಸುತ್ತಿರುವುದನ್ನು ಕಾಣಬಹುದು. ಅವರ ಜೊತೆಗೆ ಲಾಲೂ ಪ್ರಸಾದ್ ಯಾದವ್, ರಾಬ್ರಿ ದೇವಿ ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಕುಳಿತಿದ್ದಾರೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಬಿಹಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ರಾಘೋಪುರ ಕ್ಷೇತ್ರದ ಶಾಸಕರಾಗಿದ್ದಾರೆ. ತೇಜಸ್ವಿ ಯಾದವ್ 2015ರಿಂದ 2017ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದರು. 32 ವರ್ಷದ ತೇಜಸ್ವಿ ಯಾದವ್ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲೂ ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಕಿರಿಯ ಮಗ. ಅನಾರೋಗ್ಯದಿಂದ ಬಳಲುತ್ತಿರುವ ಲಾಲೂ ಪ್ರಸಾದ್ ಮೇವು ಹಗರಣದ ಆರೋಪಿಯಾಗಿದ್ದು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

2020ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಮತ್ತು ತಂದೆಗೆ ಜಾಮೀನು ಸಿಕ್ಕ ನಂತರ ಮದುವೆಯಾಗುವುದಾಗಿ ತೇಜಸ್ವಿ ಯಾದವ್ ಈ ಹಿಂದೆಯೇ ಸುಳಿವು ನೀಡಿದ್ದರು. ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಬಿಹಾರದ ಮಾಜಿ ಮುಖ್ಯಮಂತ್ರಿ ದರೋಗಾ ಪ್ರಸಾದ್ ರಾಯ್ ಅವರ ಮೊಮ್ಮಗಳು ಐಶ್ವರ್ಯಾ ರೈ ಅವರನ್ನು ಮೇ 2018ರಲ್ಲಿ ವಿವಾಹವಾಗಿದ್ದರು. ಆದರೆ, ಆರು ತಿಂಗಳೊಳಗೆ ಅವರ ಸಂಬಂಧ ಹದಗೆಟ್ಟಿದ್ದರಿಂದ ವಿಚ್ಛೇದನ ಪಡೆದಿದ್ದರು. ಇದೀಗ ನಿನ್ನೆ ಲಾಲೂ ಪ್ರಸಾದ್ ಅವರ ಕೊನೆಯ ಮಗ ತೇಜಸ್ವಿ ಯಾದವ್ ಕೂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಲಾಲೂ ಪ್ರಸಾದ್​ ಮನೆಯಲ್ಲಿ ಮದುವೆ ಸಂಭ್ರಮ; ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತೇಜಸ್ವಿ ಯಾದವ್

ಬಿಹಾರ ಚುನಾವಣೆ: ಕಾಂಗ್ರೆಸ್-ಆರ್​ಜೆಡಿ ನಡುವೆ ಮತ್ತಷ್ಟು ಬಿರುಕು, ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ವ್ಯಂಗ್ಯವಾಡಿದ ಲಾಲು ಪ್ರಸಾದ್ ಯಾದವ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ