AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಜನವಿಶ್ವಾಸ ಯಾತ್ರೆ ವೇಳೆ ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ: ಚಾಲಕ ಸಾವು, 10 ಮಂದಿಗೆ ಗಾಯ

ಇಂದು ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿದ್ದಾರೆ. ಬಿಲೋರಿ ಪನೋರಮಾ ಹೈಟ್ಸ್ ವಸತಿ ಸಮುಚ್ಚಯದ ಬಳಿ ಅಪಘಾತ ಸಂಭವಿಸಿದೆ.

ಬಿಹಾರ: ಜನವಿಶ್ವಾಸ ಯಾತ್ರೆ ವೇಳೆ ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ: ಚಾಲಕ ಸಾವು, 10 ಮಂದಿಗೆ ಗಾಯ
ಅಪಘಾತImage Credit source: India TV
ನಯನಾ ರಾಜೀವ್
|

Updated on: Feb 27, 2024 | 10:43 AM

Share

ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್(Tejashwi Yadav) ಹಮ್ಮಿಕೊಂಡಿರುವ ಜನ ವಿಶ್ವಾಸ ಯಾತ್ರೆ(Jan Vishwas Yatra) ವೇಳೆ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಚಾಲಕ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸ್ಕಾಟ್ ವಾಹನದ ಚಾಲಕ ಮೊಹಮ್ಮದ್ ಹಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಚಾಲಕ ಮಧುಬನಿ ಟಾಪ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ.

ಮತ್ತೊಂದೆಡೆ, ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ 4 ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳು ಪೂರ್ಣಿಯ GHCH ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 5 ಜನರ ಸ್ಥಿತಿ ಚಿಂತಾಜನಕವಾಗಿದೆ. ಪುರ್ನಿಯಾದ ಮುಫಾಸಿಲ್ ಪೊಲೀಸ್ ಠಾಣೆಯ ಬೆಲೌರಿ ಬಳಿ ಘಟನೆ ವರದಿಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಎಸ್‌ಪಿ ಉಪೇಂದ್ರನಾಥ್ ವರ್ಮಾ ಅವರು ಜಿಎಂಸಿಎಚ್‌ಗೆ ಆಗಮಿಸಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಎನ್ಎಚ್ 31ರಲ್ಲಿ  ವಾಹನ ಅಪಘಾತಕ್ಕೀಡಾಗಿದೆ ಎಂದು ವರ್ಮಾ ಹೇಳಿದ್ದಾರೆ.

ಮತ್ತಷ್ಟು ಓದಿ:ಡ್ರೈವರ್​ ಸೀಟ್​ನಲ್ಲಿ ತೇಜಸ್ವಿ, ಜೀಪ್​ನಲ್ಲಿ ರಾಹುಲ್ ಬಿಹಾರ ಯಾತ್ರೆ

ಜನ ವಿಶ್ವಾಸ ಯಾತ್ರೆಯ ಸಮಯದಲ್ಲಿ ತೇಜಸ್ವಿ ಯಾದವ್ ಅವರ ಬೆಂಗಾವಲು ಪಡೆ ಪೂರ್ಣಿಯ ಬೆಲೌರಿ ಮೂಲಕ ಹಾದು ಹೋಗುತ್ತಿತ್ತು. ಪೂರ್ಣಿಯಾ ಕತಿಹಾರ್ ನಾಲ್ಕು ಪಥದ ರಸ್ತೆಯಲ್ಲಿ ವಾಹನ ರಾಂಗ್ ಸೈಡ್ ಗೆ ಹೋಗಿತ್ತು. ಕತಿಹಾರ್ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆ ಕುರಿತು ಮಾಹಿತಿ ಪಡೆದ ಮೃತರ ಕುಟುಂಬದವರು ಆಸ್ಪತ್ರೆಗೆ ಆಗಮಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!