ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್(Tejashwi Yadav) ಹಮ್ಮಿಕೊಂಡಿರುವ ಜನ ವಿಶ್ವಾಸ ಯಾತ್ರೆ(Jan Vishwas Yatra) ವೇಳೆ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಚಾಲಕ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸ್ಕಾಟ್ ವಾಹನದ ಚಾಲಕ ಮೊಹಮ್ಮದ್ ಹಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಚಾಲಕ ಮಧುಬನಿ ಟಾಪ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ.
ಮತ್ತೊಂದೆಡೆ, ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ 4 ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳು ಪೂರ್ಣಿಯ GHCH ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 5 ಜನರ ಸ್ಥಿತಿ ಚಿಂತಾಜನಕವಾಗಿದೆ. ಪುರ್ನಿಯಾದ ಮುಫಾಸಿಲ್ ಪೊಲೀಸ್ ಠಾಣೆಯ ಬೆಲೌರಿ ಬಳಿ ಘಟನೆ ವರದಿಯಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಎಸ್‌ಪಿ ಉಪೇಂದ್ರನಾಥ್ ವರ್ಮಾ ಅವರು ಜಿಎಂಸಿಎಚ್‌ಗೆ ಆಗಮಿಸಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಎನ್ಎಚ್ 31ರಲ್ಲಿ ವಾಹನ ಅಪಘಾತಕ್ಕೀಡಾಗಿದೆ ಎಂದು ವರ್ಮಾ ಹೇಳಿದ್ದಾರೆ.
ಮತ್ತಷ್ಟು ಓದಿ:ಡ್ರೈವರ್ ಸೀಟ್ನಲ್ಲಿ ತೇಜಸ್ವಿ, ಜೀಪ್ನಲ್ಲಿ ರಾಹುಲ್ ಬಿಹಾರ ಯಾತ್ರೆ
ಜನ ವಿಶ್ವಾಸ ಯಾತ್ರೆಯ ಸಮಯದಲ್ಲಿ ತೇಜಸ್ವಿ ಯಾದವ್ ಅವರ ಬೆಂಗಾವಲು ಪಡೆ ಪೂರ್ಣಿಯ ಬೆಲೌರಿ ಮೂಲಕ ಹಾದು ಹೋಗುತ್ತಿತ್ತು. ಪೂರ್ಣಿಯಾ ಕತಿಹಾರ್ ನಾಲ್ಕು ಪಥದ ರಸ್ತೆಯಲ್ಲಿ ವಾಹನ ರಾಂಗ್ ಸೈಡ್ ಗೆ ಹೋಗಿತ್ತು. ಕತಿಹಾರ್ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆ ಕುರಿತು ಮಾಹಿತಿ ಪಡೆದ ಮೃತರ ಕುಟುಂಬದವರು ಆಸ್ಪತ್ರೆಗೆ ಆಗಮಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ