ತೆಲಂಗಾಣ: ಔಷಧ ಘಟಕದಲ್ಲಿ ಭಾರಿ ಸ್ಫೋಟ, 7 ಮಂದಿ ಸಾವು

|

Updated on: Apr 04, 2024 | 8:49 AM

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿಬಿದ್ದಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ.

ತೆಲಂಗಾಣ: ಔಷಧ ಘಟಕದಲ್ಲಿ ಭಾರಿ ಸ್ಫೋಟ, 7 ಮಂದಿ ಸಾವು
Follow us on

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿಬಿದ್ದಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದಿಂದ ಗೊಂದಲದ ವೀಡಿಯೊಗಳು ಹೊರಹೊಮ್ಮಿವೆ, ಇದು ಸ್ಫೋಟದ ಪ್ರಮಾಣವನ್ನು ತೋರಿಸುತ್ತದೆ.

ಔಷಧ ಕಂಪನಿಯಲ್ಲಿನ ರಿಯಾಕ್ಟರ್‌ನಲ್ಲಿ ಸ್ಫೋಟ ಸಂಭವಿಸಿದೆ ಮತ್ತು ಸ್ಫೋಟದ ಪ್ರಭಾವದಿಂದಾಗಿ ಅಲ್ಲೇ ಆಸುಪಾಸಿನಲ್ಲಿ ಕೆಲಸ ಮಾಡುತ್ತಿದ್ದವರು ಕುಸಿದುಬಿದ್ದಿದ್ದಾರೆ. 7 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. 30 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು. ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಯಿಂದಾಗಿ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಮೃತರಲ್ಲಿ ಬಿಹಾರ ನಾಲ್ವರು ಕಾರ್ಮಿಕರೂ ಇದ್ದಾರೆ. ರಿಯಾಕ್ಟರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

30 ಮಂದಿಯಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ, ಅವರೆಲ್ಲರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ