ತೆಲಂಗಾಣ ಪೊಲೀಸರಿಂದ ಎನ್‌ಕೌಂಟರ್, 7 ನಕ್ಸಲರು ಸಾವು
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸರು ಭಾರಿ ಯಶಸ್ಸು ಗಳಿಸಿದ್ದಾರೆ. ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು ಎಸ್ಪಿ ಡಾ.ಶಬರೀಶ್, ಏತೂರುನಗರಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಹೇಳಿದ್ದಾರೆ.

ತೆಲಂಗಾಣ ಪೊಲೀಸ್ ಹಾಗೂ ನಕ್ಸಲ್ ವಿರೋಧಿ ಪಡೆಗಳು ಜಂಟಿಯಾಗಿ ಎಟುರ್ನಗರಂನ ಅರಣ್ಯ ಪ್ರದೇಶದಲ್ಲಿ ಕೂಬಿಂಗ್ ಕಾರ್ಯಾಚರಣೆ ನಡೆಸಿದ್ದರು.
ಘಟನಾ ಸ್ಥಳದಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಎರಡು ಎಕೆ 47 ರೈಫಲ್‌ಗಳು ಸೇರಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದವರಲ್ಲಿ ಒಬ್ಬನನ್ನು ನಿಷೇಧಿತ ಸಿಪಿಐ (ಮಾವೋವಾದಿ) ತೆಲಂಗಾಣ ರಾಜ್ಯ ಸಮಿತಿಯ (ಯೆಲ್ಲಾಂಡು ನರಸಂಪೇಟ್) ಕಾರ್ಯದರ್ಶಿ ಕುರ್ಸಮ್ ಮಂಗು ಅಲಿಯಾಸ್ ಭದ್ರು ಎಂದು ಗುರುತಿಸಲಾಗಿದೆ.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:43 am, Sun, 1 December 24