ತೆಲಂಗಾಣ ಪೊಲೀಸರಿಂದ ಎನ್​ಕೌಂಟರ್​, 7 ನಕ್ಸಲರು ಸಾವು

ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸರು ಭಾರಿ ಯಶಸ್ಸು ಗಳಿಸಿದ್ದಾರೆ. ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು ಎಸ್ಪಿ ಡಾ.ಶಬರೀಶ್, ಏತೂರುನಗರಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಹೇಳಿದ್ದಾರೆ.

ತೆಲಂಗಾಣ ಪೊಲೀಸರಿಂದ ಎನ್​ಕೌಂಟರ್​, 7 ನಕ್ಸಲರು ಸಾವು
ಎನ್​ಕೌಂಟರ್-ಸಾಂದರ್ಭಿಕ ಚಿತ್ರ

Updated on: Dec 01, 2024 | 10:50 AM

ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸರು ಭಾರಿ ಯಶಸ್ಸು ಗಳಿಸಿದ್ದಾರೆ.
ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು ಎಸ್ಪಿ ಡಾ.ಶಬರೀಶ್, ಏತೂರುನಗರಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಹೇಳಿದ್ದಾರೆ.

ತೆಲಂಗಾಣ ಪೊಲೀಸ್ ಹಾಗೂ ನಕ್ಸಲ್ ವಿರೋಧಿ ಪಡೆಗಳು ಜಂಟಿಯಾಗಿ ಎಟುರ್ನಗರಂನ ಅರಣ್ಯ ಪ್ರದೇಶದಲ್ಲಿ ಕೂಬಿಂಗ್ ಕಾರ್ಯಾಚರಣೆ ನಡೆಸಿದ್ದರು.

ಘಟನಾ ಸ್ಥಳದಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಎರಡು ಎಕೆ 47 ರೈಫಲ್‌ಗಳು ಸೇರಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದವರಲ್ಲಿ ಒಬ್ಬನನ್ನು ನಿಷೇಧಿತ ಸಿಪಿಐ (ಮಾವೋವಾದಿ) ತೆಲಂಗಾಣ ರಾಜ್ಯ ಸಮಿತಿಯ (ಯೆಲ್ಲಾಂಡು ನರಸಂಪೇಟ್) ಕಾರ್ಯದರ್ಶಿ ಕುರ್ಸಮ್ ಮಂಗು ಅಲಿಯಾಸ್ ಭದ್ರು ಎಂದು ಗುರುತಿಸಲಾಗಿದೆ.

 

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Sun, 1 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us