ತೆಲಂಗಾಣ: ಕಾರು ಪಲ್ಟಿಯಾಗಿ ಒಂದೇ ಕುಟುಂಬದ 7 ಮಂದಿ ಸಾವು

ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದಿದೆ. ಅಪಘಾತದಲ್ಲಿ ಮಕ್ಕಳು ಸೇರಿದಂತೆ ಕುಟುಂಬದವರೆಲ್ಲರೂ ಸಾವನ್ನಪ್ಪಿದ್ದಾರೆ.

ತೆಲಂಗಾಣ: ಕಾರು ಪಲ್ಟಿಯಾಗಿ ಒಂದೇ ಕುಟುಂಬದ 7 ಮಂದಿ ಸಾವು
ಅಪಘಾತ
Follow us
|

Updated on: Oct 17, 2024 | 8:25 AM

ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದಿದೆ. ಅಪಘಾತದಲ್ಲಿ ಮಕ್ಕಳು ಸೇರಿದಂತೆ ಕುಟುಂಬದವರೆಲ್ಲರೂ ಸಾವನ್ನಪ್ಪಿದ್ದಾರೆ.

ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ, ಆದರೆ ದುರದೃಷ್ಟವಶಾತ್, ಕುಟುಂಬದ ಎಲ್ಲಾ ಸದಸ್ಯರು ಗಂಭೀರ ಗಾಯಗಳಿಂದ ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಶಿವಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ಮೇದಕ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ  ಸಂತಾಪ ವ್ಯಕ್ತಪಡಿಸಿದ್ದಾರೆ. ರಸ್ತೆ ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಪ್ರಾಣ ಕಳೆದುಕೊಂಡಿರುವುದು ಬೇಸರದ ಸಂಗತಿ ಎಂದರು.

ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಮತ್ತು ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಮೃತರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸಿದರು.

ಮತ್ತಷ್ಟು ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಕಲಬುರಗಿ: ಸರಣಿ ಅಪಘಾತದಲ್ಲಿ ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ ಜೇವರ್ಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್, ಕಾರು, ಲಾರಿ‌ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ (45) ಮೃತರು. ಕಾರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ತೆರಳುತ್ತಿತ್ತು. ಬೈಕ್‌ನಲ್ಲಿದ್ದ ಪರಮಾನಂದ ಎಂಬುವರಿಗೆ ಮತ್ತು ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ನಾಲ್ವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ‌ ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ