ತೆಲಂಗಾಣ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು
ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎರಡು ಕುಟುಂಬಗಳಿಗೆ ಸೇರಿದ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ನಾರ್ಕೆಟ್‌ಪಲ್ಲಿ-ಅದ್ದಂಕಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ಗೊಂಡ ಜಿಲ್ಲೆಯ ಮಿರ್ಯಾಲಗುಡಾದ ಚೆರುಪಳ್ಳಿ ಮಹೇಶ್ (32), ಅವರ ಪತ್ನಿ ಜ್ಯೋತಿ (30), ಪುತ್ರಿ ರಿಷಿತಾ (6), ಯಾದಾದ್ರಿ ಭುವನಗಿರಿ ಜಿಲ್ಲೆಯ ಗೊಳ್ನೆಪಲ್ಲಿಯ ಭೂಮಾ ಮಹೇಂದರ್ (32) ಮತ್ತು ಅವರ ಮಗ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ಸಂತ್ರಸ್ತರು ದೇವಸ್ಥಾನದಿಂದ ಮನೆಗೆ ಹಿಂದಿರುಗುತ್ತಿದ್ದರು ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟ ಭೂಮಾ ಮಹೇಂದರ್ ಅವರ ಪತ್ನಿ ಭೂಮಾ ಮಾಧವಿ ಗಂಭೀರ ಗಾಯಗೊಂಡಿದ್ದಾರೆ. ಮಿರ್ಯಾಲಗುಡ ಪ್ರಾದೇಶಿಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ನಂತರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮತ್ತಷ್ಟು ಓದಿ: ಬೀದರ್: ಸ್ಕಾರ್ಪಿಯೋ ವಾಹನ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು, ಪ್ರಕರಣ ದಾಖಲು
ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಿಗೆ ಡಿಕ್ಕಿ ಹೊಡೆದ ಟ್ರಕ್ ನಿಲ್ಲಿಸದೆ ವೇಗವಾಗಿ ಹೋದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ