Telangana: ಟೈರ್ ಸ್ಫೋಟ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಬಿಜೆಪಿ ನಾಯಕಿ ನೀರಜಾ ರೆಡ್ಡಿ ನಿಧನ

ತೆಲಂಗಾಣದ ಬೀಚುಪಲ್ಲಿಯಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ನಾಯಕಿ ನೀರಜಾ ರೆಡ್ಡಿ( Neeraja Reddy) ಕೊನೆಯುಸಿರೆಳೆದಿದ್ದಾರೆ.

Telangana: ಟೈರ್ ಸ್ಫೋಟ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಬಿಜೆಪಿ ನಾಯಕಿ ನೀರಜಾ ರೆಡ್ಡಿ ನಿಧನ
ನೀರಜಾ ರೆಡ್ಡಿ ಕಾರು ಪಲ್ಟಿ
Image Credit source: ANI

Updated on: Apr 17, 2023 | 1:03 PM

ತೆಲಂಗಾಣದ ಬೀಚುಪಲ್ಲಿಯಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ನಾಯಕಿ ನೀರಜಾ ರೆಡ್ಡಿ( Neeraja Reddy) ಕೊನೆಯುಸಿರೆಳೆದಿದ್ದಾರೆ. ಕರ್ನೂಲ್‌ನ ಆಲೂರು ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ಅವರು ಹೈದರಾಬಾದ್‌ನಿಂದ ಕರ್ನೂಲ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ಬೀಚುಪಲ್ಲಿ ಎಂಬಲ್ಲಿ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿತ್ತು.

ಕೋದಂಡಪುರಂ ಪೊಲೀಸರ ಪ್ರಕಾರ, 52 ವರ್ಷದ ನೀರಜಾ ತೆಲಂಗಾಣಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಕಾರಿನ ಟೈರ್ ಸ್ಫೋಟಗೊಂಡು ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ನೀರಜಾರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಆಲೂರು ಕ್ಷೇತ್ರದ ಮಾಜಿ ಶಾಸಕಿ ನೀರಜಾ ರೆಡ್ಡಿ ಅವರು 2009 ರಲ್ಲಿ ಕಾಂಗ್ರೆಸ್​ನಿಂದ ಆಯ್ಕೆಯಾದರು, ಆದರೆ ನಂತರ 2019 ರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us