ತೆಲಂಗಾಣದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿಗೆ ಗಾಯ
ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭಾನುವಾರ ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಮೂರ್ತಿ ವಿ ಸುಜಾತಾ ಅವರು ಹೈದರಾಬಾದ್‌ನಿಂದ ವಿಜಯವಾಡಕ್ಕೆ ಪ್ರಯಾಣಿಸುತ್ತಿದ್ದಾಗ ಸೂರ್ಯಪೇಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ಪೊದೆಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.

ಕೆಲವು ದಾರಿಹೋಕರು ಕಂಡು, ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ನ್ಯಾಯಮೂರ್ತಿಯನ್ನು ಸೂರ್ಯಪೇಟೆಯ ಆಸ್ಪತ್ರೆಗೆ ಸ್ಥಳಾಂತರಿಸಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಮುಂಬೈ: ಬಹುಮಹಡಿ ಕಟ್ಟಡದ ನಿರ್ಮಾಣ ಹಂತದಲ್ಲಿರುವ ಲಿಫ್ಟ್ ಕುಸಿತ , 6 ಕಾರ್ಮಿಕರು ಸಾವು
ನ್ಯಾ. ಸುಜಾತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ತಲೆಗೆ ಎರಡು ಹೊಲಿಗೆ ಹಾಕಲಾಗಿದೆ. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ