ತೆಲಂಗಾಣದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಹೈಕೋರ್ಟ್​ನ​ ನ್ಯಾಯಮೂರ್ತಿಗೆ ಗಾಯ

ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭಾನುವಾರ ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಮೂರ್ತಿ ವಿ ಸುಜಾತಾ ಅವರು ಹೈದರಾಬಾದ್‌ನಿಂದ ವಿಜಯವಾಡಕ್ಕೆ ಪ್ರಯಾಣಿಸುತ್ತಿದ್ದಾಗ ಸೂರ್ಯಪೇಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ಪೊದೆಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಹೈಕೋರ್ಟ್​ನ​ ನ್ಯಾಯಮೂರ್ತಿಗೆ ಗಾಯ
ಅಪಘಾತ

Updated on: Sep 11, 2023 | 9:20 AM

ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭಾನುವಾರ ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಮೂರ್ತಿ ವಿ ಸುಜಾತಾ ಅವರು ಹೈದರಾಬಾದ್‌ನಿಂದ ವಿಜಯವಾಡಕ್ಕೆ ಪ್ರಯಾಣಿಸುತ್ತಿದ್ದಾಗ ಸೂರ್ಯಪೇಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ಪೊದೆಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.

ಕೆಲವು ದಾರಿಹೋಕರು ಕಂಡು, ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ನ್ಯಾಯಮೂರ್ತಿಯನ್ನು ಸೂರ್ಯಪೇಟೆಯ ಆಸ್ಪತ್ರೆಗೆ ಸ್ಥಳಾಂತರಿಸಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ: ಬಹುಮಹಡಿ ಕಟ್ಟಡದ ನಿರ್ಮಾಣ ಹಂತದಲ್ಲಿರುವ ಲಿಫ್ಟ್​ ಕುಸಿತ , 6 ಕಾರ್ಮಿಕರು ಸಾವು

ನ್ಯಾ. ಸುಜಾತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ತಲೆಗೆ ಎರಡು ಹೊಲಿಗೆ ಹಾಕಲಾಗಿದೆ. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us