ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಇಂದು ಪ್ರಮಾಣವಚನ, ಯಾರ್ಯಾರು ಬರಲಿದ್ದಾರೆ?

ತೆಲಂಗಾಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ರೇವಂತ್​ ರೆಡ್ಡಿ(Revanth Reddy) ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈದರಾಬಾದ್​ನ ಎಲ್​ಬಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 1.4ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ,ಸೋನಿಯಾಗಾಂಧಿ ಸೇರಿದಂತೆ ಪ್ರಮುಖರು ಹಾಜರಾಗುವ ಸಾಧ್ಯತೆ ಇದೆ.

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಇಂದು ಪ್ರಮಾಣವಚನ, ಯಾರ್ಯಾರು ಬರಲಿದ್ದಾರೆ?
ರೇವಂತ್ ರೆಡ್ಡಿImage Credit source: Moneycontrol.com
Follow us
ನಯನಾ ರಾಜೀವ್
|

Updated on: Dec 07, 2023 | 8:15 AM

ತೆಲಂಗಾಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ರೇವಂತ್​ ರೆಡ್ಡಿ(Revanth Reddy) ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈದರಾಬಾದ್​ನ ಎಲ್​ಬಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 1.4ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ,ಸೋನಿಯಾಗಾಂಧಿ ಸೇರಿದಂತೆ ಪ್ರಮುಖರು ಹಾಜರಾಗುವ ಸಾಧ್ಯತೆ ಇದೆ.

ಮಲ್ಕಾಜ್​ಗಿರಿ ಲೋಕಸಭಾ ಕ್ಷೇತ್ರದ ಸದಸ್ಯರೂ ಆಗಿರುವ ರೇವಂತ್ ರೆಡ್ಡಿ ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿದ್ದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಭೇಟಿಯಾದ ನಂತರ ಪ್ರಮಾಣ ವಚನ ಸಮಾರಂಭ ಮತ್ತು ಸಂಪುಟದ ಸ್ಥಾನಗಳ ವಿವರಗಳನ್ನು ಚರ್ಚಿಸಿದರು.

ನಂತರ ಅವರು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು, ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸಿದ್ದರು. ಸಂಸದ ರಾಹುಲ್ ಗಾಂಧಿ ಎಕ್ಸ್​ನಲ್ಲಿ ತೆಲಂಗಾಣದ ನಿಯೋಜಿತ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಅಭಿನಂದನೆಗಳು, ಅವರ ನಾಯಕತ್ವದಲ್ಲಿ ಕಾಂಗ್ರೆಸ್​ ಸರ್ಕಾರವು ತೆಲಂಗಾಣ ಜನರಿಗೆ ಎಲ್ಲಾ ಭರವಸೆಗಳನ್ನು ಪೂರೈಸುತ್ತದೆ ಎಂದು ಬರೆದಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ರೇವಂತ್ ರೆಡ್ಡಿ ಅವರ ಆಹ್ವಾನದ ಮೇರೆಗೆ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಪಿಐ ಶಾಸಕ ಕುಣಮ್ನೇನಿ ಸಾಂಬಶಿವ ರಾವ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Revanth Reddy Love Story: ಕೇಂದ್ರ ಸಚಿವರ ಮಗಳನ್ನೇ ಪ್ರೀತಿಸಿ ಮದುವೆಯಾದ ರೇವಂತ್​ ರೆಡ್ಡಿಯ ಪ್ರೇಮ ಕಥೆ ಇಲ್ಲಿದೆ

ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ 119 ಸದಸ್ಯ ಬಲದ ರಾಜ್ಯ ಅಸೆಂಬ್ಲಿಯಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಜಯಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಸಾಧಿಸಿದೆ.

ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) 39 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಎಂಟು ಸ್ಥಾನಗಳನ್ನು ಮತ್ತು ಎಐಎಂಐಎಂ ಏಳು ಸ್ಥಾನಗಳನ್ನು ಗಳಿಸಿದೆ. ಸಿಪಿಐ 1 ಸ್ಥಾನ ಗೆದ್ದಿದೆ. ಡಿಸೆಂಬರ್ 3 ರಂದು ಮತ ಎಣಿಕೆ ಮುಗಿಯುವ ಮೊದಲೇ ಕೆಸಿಆರ್ ಅವರು ಸೋಲನ್ನು ಒಪ್ಪಿಕೊಂಡು ರಾಜ್ಯಪಾಲರಿಗೆ ರಾಜೀನಾಮೆಯನ್ನು ಕಳುಹಿಸಿದ್ದು ಅದನ್ನು ಅಂಗೀಕರಿಸಲಾಗಿದೆ.

ತೆಲಂಗಾಣ ವಿಧಾನಸಭೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ತನ್ನ ಏಳು ಸ್ಥಾನಗಳನ್ನು ಉಳಿಸಿಕೊಂಡಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಂಬತ್ತು ಸ್ಥಾನಗಳ ಪೈಕಿ ಏಳರಲ್ಲಿ ಎಐಎಂಐಎಂ ಅಭ್ಯರ್ಥಿಗಳು ಗೆದ್ದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್