ತೆಲಂಗಾಣ ವಿಧಾನಸಭಾ ಚುನಾವಣೆ: ಕ್ಷೇತ್ರ ಉಸ್ತುವಾರಿಗಳನ್ನಾಗಿ ರಾಜ್ಯ ನಾಯಕರನ್ನು ನೇಮಿಸಿದ ಎಐಸಿಸಿ

ರಾಜ್ಯ ಸರ್ಕಾರದ ವಿರುದ್ಧ ತೆಲಂಗಾಣ ಕಾಂಗ್ರೆಸ್​ ಆಕ್ರೋಶ ಹೆಚ್ಚಿಸಿದೆ. ಅಭ್ಯರ್ಥಿಗಳ ಪರ ಈಗಾಗಲೇ ಪ್ರಮುಖ ನಾಯಕರು ತೆಲಂಗಾಣದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಇದೀಗ ಕ್ಷೇತ್ರ ಉಸ್ತುವಾರಿಗಳನ್ನಾಗಿ ಕರ್ನಾಟಕದ 10 ಸಚಿವರು ಹಾಗೂ 48 ಶಾಸಕರನ್ನು ಎಐಸಿಸಿ ನೇಮಿಸಿದೆ.

ತೆಲಂಗಾಣ ವಿಧಾನಸಭಾ ಚುನಾವಣೆ: ಕ್ಷೇತ್ರ ಉಸ್ತುವಾರಿಗಳನ್ನಾಗಿ ರಾಜ್ಯ ನಾಯಕರನ್ನು ನೇಮಿಸಿದ ಎಐಸಿಸಿ
ಪ್ರಾತಿನಿಧಿಕ ಚಿತ್ರ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 04, 2023 | 9:32 PM

ದೆಹಲಿ, ನವೆಂಬರ್​​​​ 04: ತೆಲಂಗಾಣ ವಿಧಾನಸಭಾ ಚುನಾವಣೆ (Telangana Assembly Elections 2023) ಹಿನ್ನೆಲೆ ಕ್ಷೇತ್ರ ಉಸ್ತುವಾರಿಗಳನ್ನಾಗಿ ಕರ್ನಾಟಕದ 10 ಸಚಿವರು ಹಾಗೂ 48 ಶಾಸಕರನ್ನು ಎಐಸಿಸಿ ನೇಮಿಸಿದೆ. ಕ್ಲಸ್ಟರ್ ಉಸ್ತುವಾರಿಗಳಾಗಿ ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ಈಶ್ವರ ಖಂಡ್ರೆ, ಕೆ.ಹೆಚ್.ಮುನಿಯಪ್ಪ, ಜಮೀರ್ ಅಹ್ಮದ್ ಖಾನ್, ಕೃಷ್ಣ ಭೈರೇಗೌಡ, ಶರಣ ಪ್ರಕಾಶ್ ಪಾಟೀಲ್​ ಮತ್ತು ಬಿ.ನಾಗೇಂದ್ರ ಅವರಿಗೆ ತೆಲಂಗಾಣ ಚುನಾವಣಾ ಜವಾಬ್ದಾರಿ ನೀಡಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ತೆಲಂಗಾಣ ಕಾಂಗ್ರೆಸ್​ ಆಕ್ರೋಶ ಹೆಚ್ಚಿಸಿದೆ. ಅಭ್ಯರ್ಥಿಗಳ ಪರ ಈಗಾಗಲೇ ಪ್ರಮುಖ ನಾಯಕರು ತೆಲಂಗಾಣದಲ್ಲಿ ಪ್ರಚಾರ ಆರಂಭಿಸಿದ್ದಾರೆ. ವಿಜಯಭೇರಿ ಬಸ್ ಯಾತ್ರೆಯ ಮೊದಲ ಆವೃತ್ತಿಯಲ್ಲಿ ರಾಹುಲ್ ಗಾಂಧಿ ಪ್ರಚಾರದಲ್ಲಿ ಇತ್ತೀಚೆಗೆ ಪಾಲ್ಗೊಂಡಿದ್ದರು. ದೀಪಾವಳಿಯಿಂದ ಎರಡನೇ ಹಂತದ ಬಸ್ ಪ್ರಯಾಣವನ್ನು ಉನ್ನತ ನಾಯಕರು ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವು ತನ್ನ ಎರಡನೇ ಹಂತದ ವಿಜಯಭೇರಿ ಬಸ್ ಯಾತ್ರೆಯನ್ನು ಆರಂಭಿಸಲಿದೆ.

ಇದನ್ನೂ ಓದಿ: DK Shivakumar: ಡಿಕೆ ಶಿವಕುಮಾರ್ ಸಾರಥ್ಯದಲ್ಲಿ ಕಾಂಗ್ರೆಸ್ ಎರಡನೇ ಹಂತದ ಬಸ್ ಯಾತ್ರೆ ಇಂದಿನಿಂದ ಆರಂಭ

ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ಉತ್ತಮ ಪ್ರದರ್ಶನ ನೀಡಲಿದೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಡಿಸೆಂಬರ್​ನಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಗ್ಗೆ ಸಂವಾದ ಕಾರ್ಯಕ್ರಮವೊಂದ್ರಲ್ಲಿ ಮಾತಾಡಿರುವ ರಾಹುಲ್ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣೆಯಿಂದ ನಾವು ಪಾಠ ಕಲಿತಿದ್ದೇವೆ, ಹೀಗಾಗಿ ಈ ನಾಲ್ಕು ರಾಜ್ಯಗಳಲ್ಲಿ ಗೆಲ್ಲೋದಾಗಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ರೈತರಿಗೆ ಐದು ಗಂಟೆ ವಿದ್ಯುತ್: ತೆಲಂಗಾಣ ಕಾಂಗ್ರೆಸ್​​ಗೆ ಹಿನ್ನಡೆಯಾದ ಡಿಕೆ ಶಿವಕುಮಾರ್ ಹೇಳಿಕೆ

ಕರ್ನಾಟಕ ರೀತಿಯಲ್ಲಿ ತೆಲಂಗಾಣವನ್ನು ಕಾಂಗ್ರೆಸ್​ ತೆಕ್ಕೆಗೆ ತೆಗೆದುಕೊಳ್ಳಲು ಪ್ಲ್ಯಾನ್ ಮಾಡಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭರ್ಜರಿ ಸಮಾವೇಶ ನಡೆಸಿದ್ದಾರೆ. ಖಮ್ಮಮ್​ನಲ್ಲಿ ನಡೆದ ಬೃಹತ್​ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್​ ಗಾಂಧಿ, BRS ಪಕ್ಷ ಬಿಜೆಪಿಯ ಬಿ ಟೀಂ ಎಂದು ವಾಗ್ದಾಳಿ ನಡೆಸಿದ್ದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಐದು ಗಂಟೆ ವಿದ್ಯುತ್ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾಗ ನೀಡಿದ ಹೇಳಿಕೆ ಇದೀಗ ಅಲ್ಲಿನ ಕಾಂಗ್ರೆಸ್ಸಿಗರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿತ್ತು. ಅವರ ಹೇಳಿಕೆಯು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಕಳವಳ ಉಂಟುಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ