ಎಸ್​ಸಿ ಒಳ ಮೀಸಲಾತಿ ಜಾರಿ ಮಾಡಿದ ಮೊದಲ ರಾಜ್ಯ ಎನಿಸಿಕೊಂಡ ತೆಲಂಗಾಣ

|

Updated on: Apr 15, 2025 | 10:11 AM

ತೆಲಂಗಾಣ ಸರ್ಕಾರ(Telangana Government)ವು ಎಸ್​ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಆದೇಶ ಹೊರಡಿಸಿದೆ. ತೆಲಂಗಾಣದಲ್ಲಿ ಎಸ್‌ಸಿ ಪಟ್ಟಿಯಲ್ಲಿ 59 ಉಪಜಾತಿಗಳಿದ್ದು, ಜನಸಂಖ್ಯೆ, ಹಿಂದುಳಿದಿರುವಿಕೆ ಆಧಾರದಲ್ಲಿ ಅವನ್ನು ಮೂರು ಗುಂಪುಗಳನ್ನಾಗಿ ಮಾಡಿ ಮೀಸಲಾತಿ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಎಸ್​ಸಿ ಒಳ ಮೀಸಲಾತಿ ಜಾರಿ ಮಾಡಿದ ಮೊದಲ ರಾಜ್ಯ ಎನಿಸಿಕೊಂಡ ತೆಲಂಗಾಣ
ರೇವಂತ್ ರೆಡ್ಡಿ
Follow us on

ತೆಲಂಗಾಣ, ಏಪ್ರಿಲ್ 15: ತೆಲಂಗಾಣ ಸರ್ಕಾರ(Telangana Government)ವು ಎಸ್​ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ(Revanth Reddy) ನೇತೃತ್ವದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಆದೇಶ ಹೊರಡಿಸಿದೆ. ತೆಲಂಗಾಣದಲ್ಲಿ ಎಸ್‌ಸಿ ಪಟ್ಟಿಯಲ್ಲಿ 59 ಉಪಜಾತಿಗಳಿದ್ದು, ಹಿಂದುಳಿದಿರುವಿಕೆ, ಜನಸಂಖ್ಯೆ ಆಧಾರದಲ್ಲಿ ಅವನ್ನು ಮೂರು ಗುಂಪುಗಳನ್ನಾಗಿ  ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಭಾರತದಲ್ಲಿ ಎಸ್‌ಸಿ ಒಳಮೀಸಲಾತಿ ಕ್ರಾಂತಿಕಾರಿ ನಿರ್ಧಾರವನ್ನು ಜಾರಿಗೆ ತಂದ ಮೊದಲ ರಾಜ್ಯ ತೆಲಂಗಾಣವಾಗಿದೆ. ಇತಿಹಾಸ ನಿರ್ಮಿಸಿದ್ದಕ್ಕೆ ನಾವೆಲ್ಲರೂ ಹೆಮ್ಮೆಪಡುತ್ತೇವೆ. ಭಾರತ ರತ್ನ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅತ್ಯಂತ ಶುಭ ದಿನದಂದು, ತೆಲಂಗಾಣ ರಾಜ್ಯ ಸರ್ಕಾರವು ಎಸ್‌ಸಿ ಉಪ-ಜಾತಿಗಳ ವರ್ಗೀಕರಣದ ಬಹುದಿನಗಳ ಬೇಡಿಕೆಯನ್ನು ಪರಿಹರಿಸುವ ಸಾಮಾಜಿಕ ನ್ಯಾಯದ ಒಂದು ಮಹಾನ್ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಅತ್ಯುತ್ತಮ ಗೌರವ ಸಲ್ಲಿಸಿದೆ ಎಂದು ರೇವಂತ್ ರೆಡ್ಡಿ ಪೋಸ್ಟ್​ ಮಾಡಿದ್ದಾರೆ.

ದಲಿತರ ಎಲ್ಲಾ ವರ್ಗಗಳಿಗೆ ಅಧಿಕಾರ ನೀಡುವ ಮತ್ತು ಅವಕಾಶಗಳನ್ನು ಖಾತ್ರಿಪಡಿಸುವ ಮೂಲಕ, ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತು. ತೆಲಂಗಾಣ ಶಾಸಕಾಂಗವು ಫೆಬ್ರವರಿಯಲ್ಲಿ ನ್ಯಾಯಮೂರ್ತಿ ಅಖ್ತರ್ ಅವರ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿತು.

ಇದನ್ನೂ ಓದಿ
ಗ್ಯಾರಂಟಿಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಹಣಕ್ಕೆ ವಿರೋಧ: ದಲಿತ ನಾಯಕರಿಂದ ಸಭೆ
ಒಳ ಮೀಸಲಾತಿಗೆ ನಿವೃತ್ತ ನ್ಯಾ, ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ
ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ತೀರ್ಮಾನ!
ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ

ಮತ್ತಷ್ಟು ಓದಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ

ರಾಜ್ಯ ಸರ್ಕಾರದಲ್ಲಿನ ಎಲ್ಲಾ ಉದ್ಯೋಗ ಖಾಲಿ ಹುದ್ದೆಗಳನ್ನು ಈಗ ಹೊಸ ಒಳಮೀಸಲಾತಿ ಪ್ರಕಾರ ಭರ್ತಿ ಮಾಡಲಾಗುವುದು. 2026 ರ ಜನಗಣತಿಯಲ್ಲಿ ಎಸ್‌ಸಿ ಜನಸಂಖ್ಯೆ ಹೆಚ್ಚಾದರೆ, ಮೀಸಲಾತಿ ಪಾಲನ್ನು ಅದಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ. ಏ.14ರಿಂದ ತೆಲಂಗಾಣದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್‌ಸಿ ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ.

ತೆಲಂಗಾಣ ಪರಿಶಿಷ್ಟ ಜಾತಿಗಳ ಕಾಯ್ದೆಗೆ, ರಾಜ್ಯಪಾಲರು ಏಪ್ರಿಲ್ 8 ರಂದು ಅಂಕಿತ ಹಾಕಿದ್ದರು. ಏ.14 ರಂದು ಗೆಜೆಟ್‌ ಅಧಿಸೂಚನೆ ಹೊರಬಿದ್ದಿದೆ. ಕಾಂಗ್ರೆಸ್ ಸರ್ಕಾರವು ಬೇರೆ ಯಾವುದೇ ಪಕ್ಷಗಳು ಮಾಡಲಾಗದ ಕೆಲಸವನ್ನು ಮಾಡಿದೆ. ಎಲ್ಲಾ ಪಕ್ಷಗಳು ಎಸ್‌ಸಿ ವರ್ಗೀಕರಣಕ್ಕೆ ಮೌಖಿಕ ಬೆಂಬಲ ನೀಡಿವೆ, ಆದರೆ ಯಾರೂ ಅದನ್ನು ಅನುಷ್ಠಾನಕ್ಕೆ ತರಲಿಲ್ಲ.

ನಾವು ಅದನ್ನು ಕಾನೂನುಬದ್ಧವಾಗಿ, ಎಲ್ಲರನ್ನೂ ಒಳಗೊಂಡಂತೆ ಮತ್ತು ಪೂರ್ಣ ಸಿದ್ಧತೆಯೊಂದಿಗೆ ಮಾಡಿದ್ದೇವೆ ಎಂದು ಸಚಿವ ಉತ್ತಮ್​ ರೆಡ್ಡಿ ಹೇಳಿದ್ದಾರೆ.

ಕರ್ನಾಟಕದಲ್ಲೂ ಒಳಮೀಸಲಾತಿ ಕೂಗು
ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ಸಿಕ್ಕಿತ್ತು. ಒಳಮೀಸಲಾತಿ ನೀಡುವಂತೆ ರಾಜ್ಯದಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈ ಬಗ್ಗೆ ಚರ್ಚೆಗಳು ಮತ್ತು ಚಿಂತನೆಗಳು ನಡೆದಿವೆ. ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ(SC, ST for reservation) ಒಳಗಡೆಯೇ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಒಪ್ಪಿಗೆ ನೀಡಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ