AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ತೆಲಂಗಾಣದಲ್ಲಿ ತಾರಕಕ್ಕೇರಿದ ಬಿಜೆಪಿ- ಟಿಆರ್​ಎಸ್​ ಸಂಘರ್ಷ; ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಬಂಧನ

Telangana News: ಬಂಡಿ ಸಂಜಯ್ ಜನಗಾಂವ್​ನಲ್ಲಿ ಪಾದಯಾತ್ರೆ ನಡೆಸುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

Breaking News: ತೆಲಂಗಾಣದಲ್ಲಿ ತಾರಕಕ್ಕೇರಿದ ಬಿಜೆಪಿ- ಟಿಆರ್​ಎಸ್​ ಸಂಘರ್ಷ; ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಬಂಧನ
ಬಂಡಿ ಸಂಜಯ್ ಕುಮಾರ್
TV9 Web
| Updated By: ಸುಷ್ಮಾ ಚಕ್ರೆ|

Updated on:Aug 23, 2022 | 11:30 AM

Share

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ- ಟಿಆರ್​ಎಸ್​ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇಂದು ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಡಿ ಸಂಜಯ್ ಜನಗಾಂವ್​ನಲ್ಲಿ ಪಾದಯಾತ್ರೆ ನಡೆಸುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಂಡಿ ಸಂಜಯ್ ಕುಮಾರ್ ಅವರ ಜೊತೆಗೆ ಅನೇಕ ಬಿಜೆಪಿ ಕಾರ್ಯಕರ್ತರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ವಾಹನಗಳನ್ನು ಬಿಜೆಪಿ ಕಾರ್ಯಕರ್ತರು ತಡೆದರು. ಇದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಈ ಬಗ್ಗೆ ಬಂಡಿ ಸಂಜಯ್ ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದು, ಗಾಯಗೊಂಡ ಬಿಜೆಪಿ ನಾಯಕರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಪೊಲೀಸ್ ಕೇಸ್ ಮತ್ತು ಟಿಆರ್‌ಎಸ್ ಗೂಂಡಾಗಳ ದಾಳಿಗೆ ಬಿಜೆಪಿ ಹೆದರುವುದಿಲ್ಲ. ಮದ್ಯ ಹಗರಣದ ಸತ್ಯವನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮದ್ಯ ಹಗರಣದ ಆರೋಪಗಳಿಗೆ ಉತ್ತರ ನೀಡುವಂತೆ ಆಗ್ರಹಿಸಿ ಸಿಎಂ ಕೆಸಿಆರ್ ಪುತ್ರಿ ಕಲ್ವಕುಂಟ್ಲ ಕವಿತಾ ಅವರ ಮನೆಯ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರ ಮೇಲೆ ಟಿಎಸ್‌ಎಸ್ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ

ಸೋಮವಾರ ಮಧ್ಯಾಹ್ನ ಬಿಜೆಪಿ, ಭಾರತೀಯ ಜನತಾ ಯುವ ಮೋರ್ಚಾ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಕೆಲವು ಕಾರ್ಯಕರ್ತರು ಟಿಆರ್‌ಎಸ್ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಅಲ್ಲದೆ, ಕವಿತಾ ಅವರು ದೆಹಲಿ ಮದ್ಯ ನೀತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ರಾಜೀನಾಮೆಗೂ ಒತ್ತಾಯಿಸಿದ್ದರು.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಸೋಮವಾರ ಜನಗಾಂವ್ ಜಿಲ್ಲೆಯಲ್ಲಿ ಸಂಜಯ್ ಪಾದಯಾತ್ರೆಯ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಘರ್ಷಣೆಯ ನಂತರ ಬಂಧಿಸಲಾಯಿತು. ಇಂದು ಬಿಜೆಪಿ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಬಿಜೆಪಿ ಮುಖಂಡರು ಧರಣಿ ಕುಳಿತಿದ್ದರು. ಟಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಹಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದ್ದು, ಕೆಲವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Tue, 23 August 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ