ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ- ಟಿಆರ್‌ಎಸ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇಂದು ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಡಿ ಸಂಜಯ್ ಜನಗಾಂವ್ನಲ್ಲಿ ಪಾದಯಾತ್ರೆ ನಡೆಸುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಂಡಿ ಸಂಜಯ್ ಕುಮಾರ್ ಅವರ ಜೊತೆಗೆ ಅನೇಕ ಬಿಜೆಪಿ ಕಾರ್ಯಕರ್ತರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ವಾಹನಗಳನ್ನು ಬಿಜೆಪಿ ಕಾರ್ಯಕರ್ತರು ತಡೆದರು. ಇದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಈ ಬಗ್ಗೆ ಬಂಡಿ ಸಂಜಯ್ ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದು, ಗಾಯಗೊಂಡ ಬಿಜೆಪಿ ನಾಯಕರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಪೊಲೀಸ್ ಕೇಸ್ ಮತ್ತು ಟಿಆರ್‌ಎಸ್ ಗೂಂಡಾಗಳ ದಾಳಿಗೆ ಬಿಜೆಪಿ ಹೆದರುವುದಿಲ್ಲ. ಮದ್ಯ ಹಗರಣದ ಸತ್ಯವನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
BJP Telangana President Bandi Sanjay Kumar detained by Telangana Police in Jangaon District pic.twitter.com/7SY0T8aYud
— ANI (@ANI) August 23, 2022
ಮದ್ಯ ಹಗರಣದ ಆರೋಪಗಳಿಗೆ ಉತ್ತರ ನೀಡುವಂತೆ ಆಗ್ರಹಿಸಿ ಸಿಎಂ ಕೆಸಿಆರ್ ಪುತ್ರಿ ಕಲ್ವಕುಂಟ್ಲ ಕವಿತಾ ಅವರ ಮನೆಯ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರ ಮೇಲೆ ಟಿಎಸ್‌ಎಸ್ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ
Strongly condemn TS police registering a case of attempted murder against BJP leaders who were protesting at house of CM KCR’s daughter Kalvakuntla Kavitha demanding an answer to the allegations in the liquor scam. There is clear evidence that TRS goons have attacked BJP workers.
— Bandi Sanjay Kumar (@bandisanjay_bjp) August 23, 2022
ಸೋಮವಾರ ಮಧ್ಯಾಹ್ನ ಬಿಜೆಪಿ, ಭಾರತೀಯ ಜನತಾ ಯುವ ಮೋರ್ಚಾ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಕೆಲವು ಕಾರ್ಯಕರ್ತರು ಟಿಆರ್‌ಎಸ್ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಅಲ್ಲದೆ, ಕವಿತಾ ಅವರು ದೆಹಲಿ ಮದ್ಯ ನೀತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ರಾಜೀನಾಮೆಗೂ ಒತ್ತಾಯಿಸಿದ್ದರು.
BJP Telangana President Bandi Sanjay Kumar detained by Telangana Police in Jangaon District during a protest against the arrest of BJP workers in Hyderabad pic.twitter.com/prQCzR04Nk
— ANI (@ANI) August 23, 2022
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಸೋಮವಾರ ಜನಗಾಂವ್ ಜಿಲ್ಲೆಯಲ್ಲಿ ಸಂಜಯ್ ಪಾದಯಾತ್ರೆಯ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಘರ್ಷಣೆಯ ನಂತರ ಬಂಧಿಸಲಾಯಿತು. ಇಂದು ಬಿಜೆಪಿ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಬಿಜೆಪಿ ಮುಖಂಡರು ಧರಣಿ ಕುಳಿತಿದ್ದರು. ಟಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಹಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದ್ದು, ಕೆಲವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.
Published On - 11:24 am, Tue, 23 August 22