ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್​​ಗೆ 14 ದಿನಗಳ ನ್ಯಾಯಾಂಗ ಬಂಧನ

|

Updated on: Apr 05, 2023 | 10:09 PM

ಮಾಧ್ಯಮಿಕ ಶಾಲಾ ಪರೀಕ್ಷೆಯ ಪತ್ರಿಕೆಗಳ ಸೋರಿಕೆಯ ಆರೋಪದ ಮೇಲೆ ಬಂಡಿ ಸಂಜಯ್ ಕುಮಾರ್ ಅವರನ್ನು ಬಂಧಿಸಲಾಯಿತು. ಆದಾಗ್ಯೂ ಬಿಜೆಪಿ ಈ ಆರೋಪ ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದು ತಳ್ಳಿಹಾಕಿದೆ.

ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್​​ಗೆ 14 ದಿನಗಳ ನ್ಯಾಯಾಂಗ ಬಂಧನ
ಬಂಡಿ ಸಂಜಯ್ ಕುಮಾರ್
Follow us on

ಹೈದರಾಬಾದ್: ತೆಲಂಗಾಣ (Telangana) ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ (Bandi Sanjay Kumar) ಅವರನ್ನು ಮಂಗಳವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದು, ಬುಧವಾರ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕರೀಂನಗರ ಜಿಲ್ಲೆಯ ಸಂಸದರಾದ ಸಂಜಯ್ ಕುಮಾರ್ ಅವರನ್ನು ಯಾವುದೇ ವಿವರಣೆ ನೀಡದೆ ಅವರ ಮನೆಯಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರ ಪಕ್ಷದ ಸಹೋದ್ಯೋಗಿಗಳು ತಿಳಿಸಿದ್ದಾರೆ. ನಂತರ ಅವರನ್ನು ವಿವಿಧ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಿಗೆ ಸ್ಥಳಾಂತರಿಸಲಾಯಿತು. ಈ ಕ್ರಮ ಅವರ ಇರುವಿಕೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಇದನ್ನು ಅಕ್ರಮ ಬಂಧನ ಎಂದು ಕರೆದಿರುವ ಬಿಜೆಪಿಯು (BJP) ತೆಲಂಗಾಣ ಹೈಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದು ಸಂಜಯ್ ಕುಮಾರ್ ಅವರ ಬಂಧನ ಮತ್ತು ಅವರ ಪ್ರಸ್ತುತ ಸ್ಥಳದ ಆಧಾರವನ್ನು ತಿಳಿಸುವಂತೆ ಕೋರಿದೆ.

ತೀವ್ರ ಆಕ್ರೋಶದ ನಡುವೆಯೇ ಬಿಡುಗಡೆಯಾದ ಎಫ್‌ಐಆರ್​​ನಲ್ಲಿ ಪೊಲೀಸರ ಕುಮಾರ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧನ ಮಾಡಲಾಗಿದೆ ಎಂದು ಹೇಳಿದರು. ಮಾಧ್ಯಮಿಕ ಶಾಲಾ ಪರೀಕ್ಷೆಯ ಪತ್ರಿಕೆಗಳ ಸೋರಿಕೆಯ ಆರೋಪದ ಮೇಲೆ ಬಂಡಿ ಸಂಜಯ್ ಕುಮಾರ್ ಅವರನ್ನು ಬಂಧಿಸಲಾಯಿತು. ಆದಾಗ್ಯೂ ಬಿಜೆಪಿ ಈ ಆರೋಪ ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದು ತಳ್ಳಿಹಾಕಿದೆ.

ಶನಿವಾರ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ ಬಿಜೆಪಿ ಮತ್ತು ಆಡಳಿತಾರೂಢ ಬಿಆರ್‌ಎಸ್ ನಡುವಿನ ಉದ್ವಿಗ್ನತೆಯ ನಡುವೆ ಸಂಜಯ್ ಕುಮಾರ್​​ನ್ನು ಬಂಧಸಲಾಗಿದೆ.


ಬಿಆರ್‌ಎಸ್ ಸರ್ಕಾರ ಮತ್ತು ಅದರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ಸದಾ ಟೀಕಾ ಪ್ರಹಾರ ಮಾಡುತ್ತಿದ್ದ ಕುಮಾರ್ ಅವರನ್ನು ಮಂಗಳವಾರ ತಡರಾತ್ರಿ ಅವರ ನಿವಾಸದಿಂದ ಕರೆತರಲಾಯಿತು. ಅವರನ್ನು ಪೊಲೀಸರು ಎಳೆದೊಯ್ದು ಬಲವಂತವಾಗಿ ವ್ಯಾನ್‌ಗೆ ಹಾಕುತ್ತಿರುವುದು ವಿಡಿಯೊದಲ್ಲಿದೆ. ಕುಮಾರ್ ಬೆಂಬಲಿಗರು ಬಂಧನವನ್ನು ತಡೆಯಲು ಯತ್ನಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.
ಬಿಜೆಪಿಯ ರಾಷ್ಟ್ರೀಯ ನಾಯಕರು ಕುಮಾರ್ ಬಂಧನವನ್ನು ಖಂಡಿಸಿದ್ದು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಜಿ. ಕಿಶನ್ ರೆಡ್ಡಿ, ಕೇಂದ್ರ ಸಚಿವ ಮತ್ತು ತೆಲಂಗಾಣದ ಹಿರಿಯ ಬಿಜೆಪಿ ನಾಯಕ, ಇದು ಕುಮಾರ್ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ “ಪ್ರಜಾಪ್ರಭುತ್ವ ವಿರೋಧಿ” ಕೃತ್ಯವಾಗಿದೆ ಎಂದಿದ್ದಾರೆ.

ನೂರಾರು ಬಿಜೆಪಿ ಕಾರ್ಯಕರ್ತರು ವಿವಿಧ ಪೊಲೀಸ್ ಠಾಣೆಗಳ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಇವರು ರಾವ್ ಮತ್ತು ಬಿಆರ್‌ಎಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ವಿರೋಧ ಪಕ್ಷವನ್ನುಹತ್ತಿಕ್ಕಲು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Bandi Sanjay Kumar Detained: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ

2014 ರಲ್ಲಿ ಆಂಧ್ರಪ್ರದೇಶದಿಂದ ಬೇರ್ಪಟ್ಟ ದಕ್ಷಿಣದ ರಾಜ್ಯವಾದ ತೆಲಂಗಾಣದಲ್ಲಿ ತನ್ನ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ,  ರಾವ್ ಅವರನ್ನು ತನ್ನ ಪ್ರಮುಖ ಪ್ರತಿಸ್ಪರ್ಧಿ ಎಂದು ನೋಡುತ್ತದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ತೆಲಂಗಾಣದಲ್ಲಿ ನಾಲ್ಕು ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿತು. ಈ ವರ್ಷ ನಡೆಯಲಿರುವ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 2014 ರಿಂದ ಅಧಿಕಾರದಲ್ಲಿರುವ ಬಿಆರ್‌ಎಸ್‌ಗೆ ಸವಾಲು ಹಾಕಲು ಬಿಜೆಪಿ ಆಶಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ