Bandi Sanjay Kumar Detained: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ

ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್(Bandi Sanjay Kumar) ಅವರನ್ನು ಮಂಗಳವಾರ ಮಧ್ಯರಾತ್ರಿಯ ಕರೀಂನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

Bandi Sanjay Kumar Detained: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ
ಬಂಡಿ ಸಂಜಯ್ ಕುಮಾರ್Image Credit source: NDTV
Follow us
ನಯನಾ ರಾಜೀವ್
|

Updated on: Apr 05, 2023 | 8:18 AM

ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್(Bandi Sanjay Kumar) ಅವರನ್ನು ಮಂಗಳವಾರ ಮಧ್ಯರಾತ್ರಿಯ ಕರೀಂನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯಕ್ಕೆ ಭೇಟಿ ನೀಡುವುದಕ್ಕೆ ಮುಂಚಿತವಾಗಿ ಬಂಧಿಸಲಾಯಿತು. ವರದಿಯ ಪ್ರಕಾರ, ಪೊಲೀಸರ ತಂಡ ಕರೀಂನಗರದಲ್ಲಿರುವ ಸಂಸದರ ನಿವಾಸಕ್ಕೆ ತಲುಪಿ ಅವರನ್ನು ವಶಕ್ಕೆ ಪಡೆದರು. ಇದರಿಂದ ಬಂಡಿ ಸಂಜಯ್ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬೆಳಗ್ಗೆಯೇ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಿತ್ತು, ಬಂಡಿ ಸಂಜಯ್ ಎಲ್ಲಿಗೆ ಹೋಗುತ್ತಾರೆ? ಇದು ತೆಲಂಗಾಣದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಷ್ಟೇ ಉದ್ದೇಶ ಬೇರೇನೂ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ತಿಳಿಸಿದ್ದಾರೆ.

ಮಧ್ಯರಾತ್ರಿ ಸಂಸದರೊಬ್ಬರ ವಿರುದ್ಧ ಈ ಕ್ರಮದ ಅಗತ್ಯ ಏನಿತ್ತು? ಅಪರಾಧ ಮತ್ತು ಪ್ರಕರಣಗಳೇನು? ಅವರು ನಮಗೆ ಏನನ್ನೂ ಹೇಳುತ್ತಿಲ್ಲ ಎಂದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕೆಸಿಆರ್ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವುದು ಈ ಕ್ರಮದ ಹಿಂದಿನ ಕಾರಣ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬಂಡಿ ಸಂಜಯ್ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತೆಲಂಗಾಣ ಬಿಜೆಪಿ ನಾಯಕರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಿಕಂದರಾಬಾದ್‌ನಿಂದ ತಿರುಪತಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉದ್ಘಾಟಿಸುವ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು