Bandi Sanjay Kumar Detained: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ

ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್(Bandi Sanjay Kumar) ಅವರನ್ನು ಮಂಗಳವಾರ ಮಧ್ಯರಾತ್ರಿಯ ಕರೀಂನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

Bandi Sanjay Kumar Detained: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ
ಬಂಡಿ ಸಂಜಯ್ ಕುಮಾರ್
Image Credit source: NDTV

Updated on: Apr 05, 2023 | 8:18 AM

ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್(Bandi Sanjay Kumar) ಅವರನ್ನು ಮಂಗಳವಾರ ಮಧ್ಯರಾತ್ರಿಯ ಕರೀಂನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯಕ್ಕೆ ಭೇಟಿ ನೀಡುವುದಕ್ಕೆ ಮುಂಚಿತವಾಗಿ ಬಂಧಿಸಲಾಯಿತು. ವರದಿಯ ಪ್ರಕಾರ, ಪೊಲೀಸರ ತಂಡ ಕರೀಂನಗರದಲ್ಲಿರುವ ಸಂಸದರ ನಿವಾಸಕ್ಕೆ ತಲುಪಿ ಅವರನ್ನು ವಶಕ್ಕೆ ಪಡೆದರು. ಇದರಿಂದ ಬಂಡಿ ಸಂಜಯ್ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬೆಳಗ್ಗೆಯೇ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಿತ್ತು, ಬಂಡಿ ಸಂಜಯ್ ಎಲ್ಲಿಗೆ ಹೋಗುತ್ತಾರೆ? ಇದು ತೆಲಂಗಾಣದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಷ್ಟೇ ಉದ್ದೇಶ ಬೇರೇನೂ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ತಿಳಿಸಿದ್ದಾರೆ.

ಮಧ್ಯರಾತ್ರಿ ಸಂಸದರೊಬ್ಬರ ವಿರುದ್ಧ ಈ ಕ್ರಮದ ಅಗತ್ಯ ಏನಿತ್ತು? ಅಪರಾಧ ಮತ್ತು ಪ್ರಕರಣಗಳೇನು? ಅವರು ನಮಗೆ ಏನನ್ನೂ ಹೇಳುತ್ತಿಲ್ಲ ಎಂದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕೆಸಿಆರ್ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವುದು ಈ ಕ್ರಮದ ಹಿಂದಿನ ಕಾರಣ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬಂಡಿ ಸಂಜಯ್ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತೆಲಂಗಾಣ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಿಕಂದರಾಬಾದ್‌ನಿಂದ ತಿರುಪತಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉದ್ಘಾಟಿಸುವ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us