AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಉದ್ಧವ್ ಠಾಕ್ರೆ ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್

2024 ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ವಿರೋಧ ಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ.

ಮುಂಬೈನಲ್ಲಿ ಉದ್ಧವ್ ಠಾಕ್ರೆ ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್
ಉದ್ಧವ್ ಠಾಕ್ರೆ ಭೇಟಿ ಮಾಡಿದ ತೆಲಂಗಾಣ ಸಿಎಂ ಕೆಸಿಆರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 20, 2022 | 5:02 PM

Share

ಮುಂಬೈ: ತೆಲಂಗಾಣ (Telangana) ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ( K Chandrashekar Rao) ಭಾನುವಾರ ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಮತ್ತು ಅವರ ಸಂಪುಟದ ಸಚಿವರನ್ನು ಭೇಟಿ ಮಾಡಿದರು. 2024 ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ವಿರೋಧ ಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಕೆಸಿಆರ್ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಮೂಲಗಳ ಪ್ರಕಾರ, ಶಿವಸೇನೆ ಮುಖ್ಯಸ್ಥ ಠಾಕ್ರೆ ಅವರ ಆಹ್ವಾನದ ಮೇರೆಗೆ ಈ ಸಭೆ ನಡೆದಿದೆ. ಕೆಸಿಆರ್ ಅವರು ಮಹಾರಾಷ್ಟ್ರ ಪ್ರವಾಸದ ವೇಳೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಸಭೆಯಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಕೂಡ ಭಾಗವಹಿಸಿದ್ದರು. ಕೆಸಿಆರ್ ಅವರೊಂದಿಗಿನ ಸಭೆಯನ್ನು ನಿಗದಿಪಡಿಸುವ ಮೊದಲು ಠಾಕ್ರೆ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಂದ ಅನುಮತಿ ಪಡೆದಿದ್ದೀರಾ ಎಂದು ಪಕ್ಷದ ನಾಯಕ ಕಿರಿತ್ ಸೋಮಯ್ಯ ಕೇಳಿದ್ದು, ಬಿಜೆಪಿ ಠಾಕ್ರೆಯನ್ನು ತರಾಟೆಗೆ ತೆಗೆದುಕೊಂಡಿತು. “ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಠಾಕ್ರೆ ನಡುವೆ ಇದೇ ರೀತಿಯ ಸಭೆ ನಡೆಯಿತು, ಕಾಂಗ್ರೆಸ್-ಅಲ್ಲದ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿತ್ತು. ಆದರೆ ಕೆಲವೇ ದಿನಗಳಲ್ಲಿ, ಶಿವಸೇನೆ ಅವರೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿತ್ತು ಎಂದು ಸೋಮಯ್ಯ ಹೇಳಿದರು.

ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಲಾಲು ಪ್ರಸಾದ್‌ನಂತಹ ಇತರ ಎನ್‌ಡಿಎ ರಾಜ್ಯಗಳ ಸಿಎಂಗಳನ್ನು ಕೆಸಿಆರ್ ಭೇಟಿ ಮಾಡುವ ಸಾಧ್ಯತೆ ಇದೆ. ಮಮತಾ ಬ್ಯಾನರ್ಜಿ ಮತ್ತು ಎಂಕೆ ಸ್ಟಾಲಿನ್ ಕೂಡ ಬಿಜೆಪಿ ವಿರೋಧಿ ರಂಗವನ್ನು ರಚಿಸಲು ತಮ್ಮ ಆಸಕ್ತಿಯನ್ನು ತೋರಿಸಿದ್ದಾರೆ. ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಈ ಒಕ್ಕೂಟದಲ್ಲಿ ಮತ್ತಷ್ಟು ಬೆಳವಣಿಗೆಗಳನ್ನು ನಿರೀಕ್ಷಿಸಲಾಗಿದೆ.

ಈ ಉಪಕ್ರಮಕ್ಕೆ ಜೆಡಿಎಸ್‌ನ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಕೆಸಿಆರ್‌ಗೆ ಬೆಂಬಲ ನೀಡಿದ್ದಾರೆ ಎಂದು ತಿಳಿದುಬಂದಿದೆ. ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಶೀಘ್ರದಲ್ಲೇ ದೆಹಲಿಯಲ್ಲಿ ಸಮಾವೇಶ ನಡೆಸಲಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದರು.  ಕೆಸಿಆರ್ ಇತ್ತೀಚೆಗಷ್ಟೇ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ತಮ್ಮ ನಿಲುವು ಎತ್ತಿದ್ದಾರೆ.

ಇತ್ತೀಚೆಗೆ ಎರಡು ಸಾರ್ವಜನಿಕ ಸಭೆಗಳು ಮತ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಪ್ರಧಾನಿ ವಿರುದ್ಧ ಕೋಮು ರಾಜಕಾರಣದ ಆರೋಪ ಹೊರಿಸಿ, ರಾಜ್ಯಗಳ ಅಧಿಕಾರವನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದರು ಮತ್ತು ರಫೇಲ್ ಯುದ್ಧವಿಮಾನ ಒಪ್ಪಂದದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದರು.

75 ವರ್ಷಗಳ ಸ್ವಾತಂತ್ರ್ಯದ ನಂತರ ದೇಶದ ರಾಜಕೀಯ ಮತ್ತು ಅಭಿವೃದ್ಧಿಯ ವೇಗವನ್ನು ಚರ್ಚಿಸಲು ನಾನು ಮಹಾರಾಷ್ಟ್ರಕ್ಕೆ ಬಂದಿದ್ದೇನೆ. ಉದ್ಧವ್ ಜಿ ಅವರನ್ನು ಭೇಟಿಯಾಗಿದ್ದು ತುಂಬಾ ಸಂತೋಷವಾಯಿತು, ನಾವು ಸಹೋದರರಂತೆ ಇದ್ದೇವೆ. ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ದೇಶದಲ್ಲಿ ಇನ್ನೂ ಅನೇಕ ಜನರು ಸಮಾನವಾಗಿ ಯೋಚಿಸುತ್ತಾರೆ ಮತ್ತು ನಾವು ಅವರೊಂದಿಗೆ ಮಾತನಾಡುತ್ತೇವೆ. ಇನ್ನು ಕೆಲವೇ ದಿನಗಳಲ್ಲಿ ಹೈದರಾಬಾದ್ ಅಥವಾ ಬೇರೆಡೆ ಕುಳಿತು ಹೆಚ್ಚಿನ ಚರ್ಚೆ ಮಾಡುತ್ತೇವೆ ಎಂದು ಸಭೆಯ ನಂತರ ಕೆಸಿಆರ್ ಸುದ್ದಿಗಾರರಿಗೆ ತಿಳಿಸಿದರು.

“ದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಮತ್ತು ಕೀಳುಮಟ್ಟದ ರಾಜಕೀಯ ನಡೆಯುತ್ತಿರುವುದು ಹಿಂದುತ್ವವಲ್ಲ. ಹೀಗೆಯೇ ಮುಂದುವರಿದರೆ ದೇಶದ ಭವಿಷ್ಯವೇನು? ಯಾರು ಬೇಕಾದರೂ ಮುಖ್ಯಮಂತ್ರಿ ಅಥವಾ ಪ್ರಧಾನಿಯಾಗಬಹುದು, ಆದರೆ ನಾವು ದೇಶದ ಭವಿಷ್ಯದ ಬಗ್ಗೆ ಸಭೆ ನಡೆಸಿದ್ದೇವೆ ಎಂದು ಠಾಕ್ರೆ ಹೇಳಿದ್ದಾರೆ. ಠಾಕ್ರೆ ರಾವ್ ಅವರೊಂದಿಗೆ ಉದ್ಯಾನದಲ್ಲಿ ಕುಳಿತಿರುವ ಫೋಟೊಗಳನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಶಿವಸೇನಾ ಮುಖ್ಯಸ್ಥರ ಕಿರಿಯ ಪುತ್ರ ತೇಜಸ್ ಠಾಕ್ರೆ ಕೂಡ ಕಾಣಿಸಿಕೊಂಡಿದ್ದಾರೆ. ಶ ಠಾಕ್ರೆ ಅವರು ರಾವ್ ಅವರೊಂದಿಗೆ ತೆಲಂಗಾಣ ರಾಷ್ಟ್ರ ಸಮಿತಿಯ ನಾಯಕರನ್ನು ಸ್ವಾಗತಿಸುತ್ತಿರುವುದು ವಿಡಿಯೊ ಕ್ಲಿಪ್ ನಲ್ಲೆ. ಬಿಜೆಪಿ ವಿರೋಧಿ ನಿಲುವಿಗೆ ಹೆಸರಾದ ನಟ-ರಾಜಕಾರಣಿ ಪ್ರಕಾಶ್ ರಾಜ್ ಕೂಡ ಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್‌ಗೆ ಚುನಾವಣಾ ಆಯೋಗ ನೋಟಿಸ್

Published On - 4:53 pm, Sun, 20 February 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ