AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ನೇಣು ಹಾಕಿಕೊಂಡು ಕಾಂಗ್ರೆಸ್​​ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ಆತ್ಮಹತ್ಯೆ

Choppadandi MLA Medipally Sathyam wife Rupa Devi commits suicide:​ ಚೊಪ್ಪದಂಡಿ ಶಾಸಕನ ಪತ್ನಿ: ತೆಲಂಗಾಣ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಮೇಡಿಪಲ್ಲಿ ಸತ್ಯಂ ರೂಪಾದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದರು.

ಮನೆಯಲ್ಲಿ ನೇಣು ಹಾಕಿಕೊಂಡು ಕಾಂಗ್ರೆಸ್​​ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ಆತ್ಮಹತ್ಯೆ
ಮನೆಯಲ್ಲಿ ನೇಣು ಹಾಕಿಕೊಂಡು ಕಾಂಗ್ರೆಸ್​​ ಶಾಸಕನ ಪತ್ನಿ,ಶಾಲಾ ಶಿಕ್ಷಕಿ ಸಾವು
ಸಾಧು ಶ್ರೀನಾಥ್​
|

Updated on:Jun 21, 2024 | 8:57 AM

Share

ಕರೀಂನಗರ, ಜೂ. 21: ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್​​ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಮೇಡಿಪಲ್ಲಿ ಸತ್ಯಂ ರೂಪಾದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಪತ್ನಿ ರೂಪಾದೇವಿ ಜೊತೆ ವೈಮನಸ್ಯ ಇರುವ ಶಂಕೆ ವ್ಯಕ್ತವಾಗಿದೆ. ರೂಪಾದೇವಿ ಮೇಡ್ಚಲ್ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು (Choppadandi MLA Medipally Sathyam wife Rupa Devi commits suicide).

ಕಳೆದ ಒಂದು ವರ್ಷದಿಂದ ಕೊಂಪಲ್ಲಿ ಪೇಟ್ ಬಶೀರಾಬಾದ್‌ನ ದವೇರಿಯಾ ವಿಲ್ಲಾಸ್‌ನಲ್ಲಿ ನೆಲೆಸಿದ್ದರು. ಆದರೆ, ಒಂದು ತಿಂಗಳ ಹಿಂದೆಯಷ್ಟೇ ಹೈದರಾಬಾದ್‌ನ ಅಲ್ವಾಲ್‌ನ ಪಂಚಶೀಲಾ ಕಾಲೋನಿ ರಸ್ತೆ ಸಂಖ್ಯೆ 12ಕ್ಕೆ ಸ್ಥಳಾಂತರಗೊಂಡಿದ್ದಾರೆ. ಸತ್ಯಂ-ರೂಪಾದೇವಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಗ ಯೋಜಿತ್ (11) ಮತ್ತು ಮಗಳು ರಿಷಿಕಾ ಶ್ರೀ (9). ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ.

ರೂಪಾದೇವಿ ವೀಡಿಯೋ ಕಾಲ್ ಮಾಡಿ ಶಾಸಕ ಸತ್ಯಂಗೆ ತಾನು ಸಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ಕೂಡಲೇ ಚೊಪ್ಪದಂಡಿಯಿಂದ ಕಾರಿನಲ್ಲಿ ಹೈದರಾಬಾದ್ ಗೆ ಹೊರಟುಬಂದಿದ್ದಾರೆ. ಆದರೆ ಅಲ್ವಾಲ್ ತಲುಪಿದಾಗ ರೂಪಾದೇವಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವು ಕಂಡುಬಂದಿದೆ. ಕೂಡಲೇ ಆಕೆಯನ್ನು ಮನೆ ಸಮೀಪದ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಪತ್ನಿಯ ಸಾವನ್ನು ಸಹಿಸಲಾಗದೆ ಶಾಸಕ ಸತ್ಯಂ ಆಸ್ಪತ್ರೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ರಾಜ್ಯ ಸಚಿವ ಪೊನ್ನಂ ಪ್ರಭಾಕರ್ ಅವರು ಕೊಂಪೆಲಿಯ ಖಾಸಗಿ ಆಸ್ಪತ್ರೆಗೆ ಶಾಸಕರನ್ನು ಭೇಟಿ ಮಾಡಿದರು. ಮೇಡ್ಚಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಲಾಗುವುದು. ಆಕೆಯ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 am, Fri, 21 June 24