AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ

ತೆಲಂಗಾಣದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈಗ ಬಾಲಕಿ ಗರ್ಭಿಣಿಯಾಗಿದ್ದಾಳೆ.ವಿದ್ಯಾರ್ಥಿನಿ ಅನಾರೋಗ್ಯದಿಂದ ಬಳಲುತ್ತಿದ್ದಳು, ಹೀಗಾಗಿ ತಾಯಿ ಸಿದ್ದಿಪೇಟೆಯ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಗರ್ಭಿಣಿ ಎಂದು ತಿಳಿದುಬಂದಿದೆ. ನಂತರ, ಭರೋಸಾ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು ಮತ್ತು ಬಾಲಕಿಯಿಂದ ವಿವರವಾದ ಮಾಹಿತಿಯನ್ನು ಸಂಗ್ರಹಿಸಿದರು.

ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ
ಅಪರಾಧImage Credit source: India Today
ನಯನಾ ರಾಜೀವ್
|

Updated on: Sep 09, 2024 | 8:04 AM

Share

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಾಲಕಿಯ ಪೋಷಕರು ಆಕೆ ಗರ್ಭಿಣಿ ಎಂದು ತಿಳಿದು ಆರೋಪಿ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣ ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಸಿದ್ದಿಪೇಟೆ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಜಿ ಮಧು ಅವರು ಹೇಳುವ ಪ್ರಕಾರ, ವಿದ್ಯಾರ್ಥಿನಿ ಅನಾರೋಗ್ಯದಿಂದ ಬಳಲುತ್ತಿದ್ದಳು, ಹೀಗಾಗಿ ತಾಯಿ ಸಿದ್ದಿಪೇಟೆಯ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಗರ್ಭಿಣಿ ಎಂದು ತಿಳಿದುಬಂದಿದೆ. ನಂತರ, ಭರೋಸಾ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು ಮತ್ತು ಬಾಲಕಿಯಿಂದ ವಿವರವಾದ ಮಾಹಿತಿಯನ್ನು ಸಂಗ್ರಹಿಸಿದರು.

ದುಬಕ್ಕ ಮಂಡಲದ ಒಬ್ಬರು ಮತ್ತು ಅಕ್ಬರಪೇಟ್-ಭೂಂಪಲ್ಲಿ ಮಂಡಲದ ಇಬ್ಬರು ಸೇರಿದಂತೆ ಮೂವರು ಯುವಕರು ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಬಾಲಕಿಯ ಮನೆಗೆ ಆಕೆಯ ತಾಯಿ ಇಲ್ಲದಿದ್ದಾಗ ಪದೇ ಪದೇ ಭೇಟಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ

ಬಾಲಕಿಗೆ ಆಮಿಷವೊಡ್ಡಿ ಮೋಸದ ತಂತ್ರಗಳನ್ನು ಹೆಣೆದು ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ತಾಯಿ ದೂರು ದಾಖಲಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲು ಅಧಿಕಾರಿಗಳು ಸೂಚಿಸಿದ್ದು, ಭಾನುವಾರ ಅವರನ್ನು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ