ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಾಲಕಿಯ ಪೋಷಕರು ಆಕೆ ಗರ್ಭಿಣಿ ಎಂದು ತಿಳಿದು ಆರೋಪಿ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣ ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಸಿದ್ದಿಪೇಟೆ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಜಿ ಮಧು ಅವರು ಹೇಳುವ ಪ್ರಕಾರ, ವಿದ್ಯಾರ್ಥಿನಿ ಅನಾರೋಗ್ಯದಿಂದ ಬಳಲುತ್ತಿದ್ದಳು, ಹೀಗಾಗಿ ತಾಯಿ ಸಿದ್ದಿಪೇಟೆಯ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಗರ್ಭಿಣಿ ಎಂದು ತಿಳಿದುಬಂದಿದೆ. ನಂತರ, ಭರೋಸಾ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು ಮತ್ತು ಬಾಲಕಿಯಿಂದ ವಿವರವಾದ ಮಾಹಿತಿಯನ್ನು ಸಂಗ್ರಹಿಸಿದರು.
ದುಬಕ್ಕ ಮಂಡಲದ ಒಬ್ಬರು ಮತ್ತು ಅಕ್ಬರಪೇಟ್-ಭೂಂಪಲ್ಲಿ ಮಂಡಲದ ಇಬ್ಬರು ಸೇರಿದಂತೆ ಮೂವರು ಯುವಕರು ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಬಾಲಕಿಯ ಮನೆಗೆ ಆಕೆಯ ತಾಯಿ ಇಲ್ಲದಿದ್ದಾಗ ಪದೇ ಪದೇ ಭೇಟಿ ನೀಡಿದ್ದರು ಎಂದು ಆರೋಪಿಸಲಾಗಿದೆ.
ಮತ್ತಷ್ಟು ಓದಿ: Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ
ಬಾಲಕಿಗೆ ಆಮಿಷವೊಡ್ಡಿ ಮೋಸದ ತಂತ್ರಗಳನ್ನು ಹೆಣೆದು ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ತಾಯಿ ದೂರು ದಾಖಲಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲು ಅಧಿಕಾರಿಗಳು ಸೂಚಿಸಿದ್ದು, ಭಾನುವಾರ ಅವರನ್ನು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ