ಹೊಟ್ಟೆಯಲ್ಲಿ ಹುಣ್ಣು; ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

|

Updated on: Mar 12, 2023 | 8:26 PM

ರಾವ್ ಅವರನ್ನು ಎಐಜಿ ಆಸ್ಪತ್ರೆಗಳಿಗೆ ಕರೆತರಲಾಯಿತು, ನಂತರ ಸಿಟಿ ಮತ್ತು ಎಂಡೋಸ್ಕೋಪಿ ನಡೆಸಲಾಯಿತು. ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಂಡುಬಂದಿದೆ. ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಹೊಟ್ಟೆಯಲ್ಲಿ ಹುಣ್ಣು; ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು
ಕೆ ಚಂದ್ರಶೇಖರ್ ರಾವ್
Follow us on

ತೆಲಂಗಾಣ (Telangana) ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrasekhar Rao) ಅವರಿಗೆ ಹೊಟ್ಟೆಯಲ್ಲಿ ಅಸ್ವಸ್ಥತೆ ಅನುಭವವಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಂಡುಬಂದಿದೆ ಎಂದು ಆಸ್ಪತ್ರೆ ತಿಳಿಸಿದೆ. ಅಲ್ಸರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಆರೋಗ್ಯ ಸಾಮಾನ್ಯವಾಗಿದೆ. 69 ವರ್ಷದ ರಾವ್ ಅವರಿಗೆ ಬೆಳಿಗ್ಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಎಂದು ಎಐಜಿ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿವೆ.

ರಾವ್ ಅವರನ್ನು ಎಐಜಿ ಆಸ್ಪತ್ರೆಗಳಿಗೆ ಕರೆತರಲಾಯಿತು, ನಂತರ ಸಿಟಿ ಮತ್ತು ಎಂಡೋಸ್ಕೋಪಿ ನಡೆಸಲಾಯಿತು. ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಂಡುಬಂದಿದೆ. ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಮುಖ್ಯಮಂತ್ರಿ ಅವರನ್ನು ಎಐಜಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅಲ್ಲಿ ಅವರನ್ನು ಗ್ಯಾಸ್ಟ್ರೋಎಂಟರಾಲಜಿ ಮುಖ್ಯಸ್ಥರೂ ಆಗಿರುವ ಆಸ್ಪತ್ರೆಯ ಅಧ್ಯಕ್ಷ ಡಾ ಡಿ ನಾಗೇಶ್ವರ ರೆಡ್ಡಿ ಅವರು ಪರೀಕ್ಷಿಸಿದರು. ನಂತರ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರನ್ನು ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಯಿತು ಎಂದು ಆಸ್ಪತ್ರೆ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:24 pm, Sun, 12 March 23