ತೆಲಂಗಾಣ: 35 ವರ್ಷಗಳಲ್ಲಿ 236 ಬಾರಿ ಚುನಾವಣೆಗಳಲ್ಲಿ ಸ್ಪರ್ಧಿಸಿರುವ ಪದ್ಮರಾಜನ್ರಿಂದ ನಾಮಪತ್ರ ಸಲ್ಲಿಕೆ
ತೆಲಂಗಾಣದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಅಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಆರಂಭವಾಗಿದೆ. ಅನೇಕ ದೊಡ್ಡ ನಾಯಕರು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ, ಆದರೆ ಸ್ವತಂತ್ರ ಅಭ್ಯರ್ಥಿ ಹೆಚ್ಚು ಸುದ್ದಿ ಮಾಡುತ್ತಿದ್ದಾರೆ. ಈ ಅಭ್ಯರ್ಥಿ ಉಳಿದವರಿಗಿಂತ ತುಸು ಭಿನ್ನ.
ತೆಲಂಗಾಣದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ(Assembly Election) ಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಅಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಆರಂಭವಾಗಿದೆ. ಅನೇಕ ದೊಡ್ಡ ನಾಯಕರು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ, ಆದರೆ ಸ್ವತಂತ್ರ ಅಭ್ಯರ್ಥಿ ಹೆಚ್ಚು ಸುದ್ದಿ ಮಾಡುತ್ತಿದ್ದಾರೆ. ಈ ಅಭ್ಯರ್ಥಿ ಉಳಿದವರಿಗಿಂತ ತುಸು ಭಿನ್ನ.
ಅಭ್ಯರ್ಥಿಯ ಹೆಸರು ಪದ್ಮರಾಜನ್. ಪದ್ಮರಾಜನ್ ಗಜ್ವೇಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪದ್ಮರಾಜನ್ ನಾಮಪತ್ರ ಸಲ್ಲಿಸಿದ ನಂತರ ಚುನಾವಣಾ ಪ್ರಚಾರವನ್ನೂ ಆರಂಭಿಸಿದ್ದಾರೆ.
ಡೆಕ್ಕನ್ ಹೆರಾಲ್ಡ್ ವರದಿ ಪ್ರಕಾರ, ಎಲೆಕ್ಷನ್ ಕಿಂಗ್ ಎಂದೇ ಖ್ಯಾತರಾಗಿರುವ ಪದ್ಮರಾಜನ್ ಅವರು ದೇಶಾದ್ಯಂತ 236 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ತಮಿಳುನಾಡು, ಕರ್ನಾಟಕ, ಯುಪಿ ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ ರಾಷ್ಟ್ರಪತಿಗಳಿಗೆ ಚುನಾವಣೆ ಸೇರಿದಂತೆ ಇದು ಅವರ 237 ನೇ ನಾಮನಿರ್ದೇಶನವಾಗಿದೆ ಎಂದು ಪದ್ಮರಾಜನ್ ಹೇಳಿದರು. ಜನರು ಕೂಡ ಅವರನ್ನು ಭೇಟಿಯಾಗಿ ಫೋಟೋ ತೆಗೆಸಿಕೊಳ್ಳುತ್ತಾರೆ.
ಮೆಟ್ಟೂರು ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಟೈರ್ ರಿಪೇರಿ ಅಂಗಡಿ ನಡೆಸುತ್ತಿರುವ ಪದ್ಮರಾಜನ್, 1988ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆ ಮೆಟ್ಟೂರು ಕ್ಷೇತ್ರದಿಂದ ಮೊದಲ ಬಾರಿಗೆ ನಾಮಪತ್ರ ಸಲ್ಲಿಸಿದ್ದೆ. ಅಂದಿನಿಂದ ಈ ಪ್ರವೃತ್ತಿ ಮುಂದುವರೆದಿದೆ. ಅವರು ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಪಿವಿ ನರಸಿಂಹರಾವ್ ಅವರ ವಿರುದ್ಧವೂ ಚುನಾವಣೆಯಲ್ಲಿ ಸ್ಪರ್ಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಈಗ ಕೆಸಿಆರ್ ವಿರುದ್ಧ ಸ್ಪರ್ಧಿಸಿದ್ದಾರೆ.
ಇದುವರೆಗೆ ಚುನಾವಣೆಯಲ್ಲಿ 1 ಕೋಟಿ ರೂ. ಠೇವಣಿ ಕಳೆದುಕೊಂಡಿದ್ದಾರೆ ಪದ್ಮರಾಜನ್ ಅವರು ಹೋಮಿಯೋಪತಿ ವೈದ್ಯರೂ ಕೂಡ ಆಗಿದ್ದಾರೆ, ಚುನಾವಣೆಗೆ ಸ್ಪರ್ಧಿಸುವ ಉತ್ಸಾಹದಿಂದ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆಮ, ಈ ಉತ್ಸಾಹಕ್ಕಾಗಿ ಅವರು ಇಲ್ಲಿಯವರೆಗೆ ಸುಮಾರು 1 ಕೋಟಿ ರೂ. ಠೇವಣಿ ಹಣ ಕಳೆದುಕೊಂಡಿದ್ದಾರೆ.
ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕೇರಳದ ವಯನಾಡ್‌ನಿಂದ ಮಾಜಿ ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿದ್ದರು. ಇಷ್ಟು ಚುನಾವಣೆಗಳಲ್ಲಿ 2011ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮೆಟ್ಟೂರು ಕ್ಷೇತ್ರದಿಂದ ಅತಿ ಹೆಚ್ಚು ಮತಗಳನ್ನು ಪಡೆದೆ ಎಂದು ಪದ್ಮರಾಜನ್ ಹೇಳುತ್ತಾರೆ. ಆಗ ಅವರು 6273 ಮತಗಳನ್ನು ಪಡೆದಿದ್ದರು. ಅದೇ ಸಮಯದಲ್ಲಿ, ಅವರು ಕೆಲವು ಪಂಚಾಯತ್ ಚುನಾವಣೆಗಳಲ್ಲಿ ಒಂದೇ ಒಂದು ಮತವನ್ನು ಪಡೆದಿಲ್ಲ. ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:16 am, Thu, 9 November 23