Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​ನ ಸೆಕೆಂಡ್ ಹ್ಯಾಂಡ್ ಕಾರು ಶೋರೂಂನಲ್ಲಿ ಅಗ್ನಿ ಅವಘಡ, ಹಲವು ಕಾರುಗಳು ಬೆಂಕಿಗಾಹುತಿ

 ಹೈದರಾಬಾದ್​ನ  ಎಲ್ ಬಿ ನಗರದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರು ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರ ಪ್ರಕಾರ, ಎಲ್‌ಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂನ ಗ್ಯಾರೇಜ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

Video: ಹೈದರಾಬಾದ್​ನ ಸೆಕೆಂಡ್ ಹ್ಯಾಂಡ್ ಕಾರು ಶೋರೂಂನಲ್ಲಿ ಅಗ್ನಿ ಅವಘಡ, ಹಲವು ಕಾರುಗಳು ಬೆಂಕಿಗಾಹುತಿ
ಕಾರು ಶೋರೂಂಗೆ ಬೆಂಕಿImage Credit source: NewsMeter Telugu
Follow us
ನಯನಾ ರಾಜೀವ್
|

Updated on:May 31, 2023 | 10:59 AM

ಹೈದರಾಬಾದ್​ನ  ಎಲ್ ಬಿ ನಗರದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರು ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರ ಪ್ರಕಾರ, ಎಲ್‌ಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂನ ಗ್ಯಾರೇಜ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹೈದರಾಬಾದ್‌ನ ಎಲ್‌ಬಿ ನಗರದ ಬಿವಿಕೆ ಚಿತ್ರಮಂದಿರದ ಪಕ್ಕದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂನಲ್ಲಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಆಸ್ತಿಪಾಸ್ತಿ ನಷ್ಟವಾಗಿದ್ದು ಇನ್ನೂ ತಿಳಿದುಬಂದಿಲ್ಲ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ ಎಂದು ಎಲ್ ಬಿ ನಗರ ಸರ್ಕಲ್ ಇನ್ಸ್​ಪೆಕ್ಟರ್​ ಅಂಜಿ ರೆಡ್ಡಿ ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಾಗ ಗ್ಯಾರೇಜ್‌ನಲ್ಲಿ ಸುಮಾರು 20 ರಿಂದ 30 ಕಾರುಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ವ್ಯಾಪಿಸಲು ಆರಂಭಿಸಿದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾರೇಜ್‌ನಲ್ಲಿ ಸಿಲಿಂಡರ್‌ಗಳನ್ನು ಇಡಲಾಗಿರುವುದರಿಂದ ಬೆಂಕಿ ಹೊತ್ತಿಕೊಂಡಾಗ ಭಾರೀ ಸದ್ದು ಕೇಳಿ ಬಂದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:58 am, Wed, 31 May 23

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು