Video: ಹೈದರಾಬಾದ್​ನ ಸೆಕೆಂಡ್ ಹ್ಯಾಂಡ್ ಕಾರು ಶೋರೂಂನಲ್ಲಿ ಅಗ್ನಿ ಅವಘಡ, ಹಲವು ಕಾರುಗಳು ಬೆಂಕಿಗಾಹುತಿ

|

Updated on: May 31, 2023 | 10:59 AM

 ಹೈದರಾಬಾದ್​ನ  ಎಲ್ ಬಿ ನಗರದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರು ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರ ಪ್ರಕಾರ, ಎಲ್‌ಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂನ ಗ್ಯಾರೇಜ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

Video: ಹೈದರಾಬಾದ್​ನ ಸೆಕೆಂಡ್ ಹ್ಯಾಂಡ್ ಕಾರು ಶೋರೂಂನಲ್ಲಿ ಅಗ್ನಿ ಅವಘಡ, ಹಲವು ಕಾರುಗಳು ಬೆಂಕಿಗಾಹುತಿ
ಕಾರು ಶೋರೂಂಗೆ ಬೆಂಕಿ
Image Credit source: NewsMeter Telugu
Follow us on

ಹೈದರಾಬಾದ್​ನ  ಎಲ್ ಬಿ ನಗರದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರು ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರ ಪ್ರಕಾರ, ಎಲ್‌ಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂನ ಗ್ಯಾರೇಜ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹೈದರಾಬಾದ್‌ನ ಎಲ್‌ಬಿ ನಗರದ ಬಿವಿಕೆ ಚಿತ್ರಮಂದಿರದ ಪಕ್ಕದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂನಲ್ಲಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಆಸ್ತಿಪಾಸ್ತಿ ನಷ್ಟವಾಗಿದ್ದು ಇನ್ನೂ ತಿಳಿದುಬಂದಿಲ್ಲ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ ಎಂದು ಎಲ್ ಬಿ ನಗರ ಸರ್ಕಲ್ ಇನ್ಸ್​ಪೆಕ್ಟರ್​ ಅಂಜಿ ರೆಡ್ಡಿ ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಾಗ ಗ್ಯಾರೇಜ್‌ನಲ್ಲಿ ಸುಮಾರು 20 ರಿಂದ 30 ಕಾರುಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ವ್ಯಾಪಿಸಲು ಆರಂಭಿಸಿದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 10:58 am, Wed, 31 May 23