AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಕೆಸಿಆರ್ ಫಾರ್ಮ್‌ಹೌಸ್ ಬಳಿ ಜಮೀನು ನಾಪತ್ತೆ!; ನೋಟಿಸ್ ಜಾರಿಗೆ ತೆಲಂಗಾಣ ಸರ್ಕಾರ ಆದೇಶ

ತೆಲಂಗಾಣದ ಸಿದ್ಧಿಪೇಟೆಯ ಎರ್ರಾವೆಲ್ಲಿ ಗ್ರಾಮದಲ್ಲಿರುವ ತಮ್ಮ ಫಾರ್ಮ್‌ಹೌಸ್‌ಗೆ ಹೊಂದಿಕೊಂಡಿರುವ ಜಮೀನಿನ ದಾಖಲೆಗಳಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಮೇಲೆ ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಮತ್ತು ಅವರ ಕುಟುಂಬದ ಸದಸ್ಯರಿಗೆ ನೋಟಿಸ್ ಜಾರಿ ಮಾಡುವಂತೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ತನಿಖೆಯ ಪರಾಮರ್ಶೆ ನಡೆಸಿದ ನಂತರ ಈ ನಿರ್ದೇಶನ ನೀಡಿದ್ದಾರೆ.

ಮಾಜಿ ಸಿಎಂ ಕೆಸಿಆರ್ ಫಾರ್ಮ್‌ಹೌಸ್ ಬಳಿ ಜಮೀನು ನಾಪತ್ತೆ!; ನೋಟಿಸ್ ಜಾರಿಗೆ ತೆಲಂಗಾಣ ಸರ್ಕಾರ ಆದೇಶ
ಕೆಸಿಆರ್- ರೇವಂತ್ ರೆಡ್ಡಿImage Credit source: TV9
ಸುಷ್ಮಾ ಚಕ್ರೆ
|

Updated on: Oct 07, 2026 | 3:14 PM

Share

ಹೈದರಾಬಾದ್, ಅಕ್ಟೋಬರ್ 7: ತೆಲಂಗಾಣದ ಸಿದ್ಧಿಪೇಟೆ ಜಿಲ್ಲೆಯಲ್ಲಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್​ಎಸ್​) ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಫಾರ್ಮ್‌ಹೌಸ್ ಬಳಿ ‘ಕಾಣೆಯಾಗಿರುವ’ 45 ಎಕರೆಗೂ ಹೆಚ್ಚು ಜಮೀನಿನ ದಾಖಲೆಗಳನ್ನು ಸಲ್ಲಿಸುವಂತೆ ಅವರಿಗೆ ನೋಟಿಸ್ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಕಳೆದ ತಿಂಗಳು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಆದೇಶದಂತೆ ನಡೆಸಿದ ಜಮೀನು ಸರ್ವೆಯಲ್ಲಿ, 45 ಎಕರೆ ಜಮೀನು “ಕಾಣೆಯಾಗಿರುವುದು” ಕಂದಾಯ ಇಲಾಖೆ ಅಧಿಕಾರಿಗಳ ತನಿಖೆಯಲ್ಲಿ ತಿಳಿದುಬಂದಿದೆ. ಮಂಗಳವಾರ ಮುಖ್ಯಮಂತ್ರಿಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಪರಾಮರ್ಶೆ ಸಭೆ ನಡೆಸಿದರು.

ಈ ಸಭೆಯ ವೇಳೆ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಸಿದ್ಧಿಪೇಟೆ ಜಿಲ್ಲೆಯ ಎರ್ರಾವೆಲ್ಲಿ ಹಾಗೂ ಸಿವಾರೂ ವೆಂಕಟಾಪುರ ಗ್ರಾಮಗಳಲ್ಲಿ ಸರ್ವೆ ನಡೆಸಲಾಗಿದೆ. ಮಾಜಿ ಸಿಎಂ ಅವರ ಫಾರ್ಮ್‌ಹೌಸ್ ಎರ್ರಾವೆಲ್ಲಿ ಗ್ರಾಮದಲ್ಲಿದೆ. ಅಧಿಕಾರಿಗಳು ಶೀಘ್ರದಲ್ಲೇ ಕೆಸಿಆರ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ. ತನಿಖೆಯ ನಂತರ ಈ ಜಮೀನನ್ನು ಅರ್ಹ ಸ್ಥಳೀಯ ರೈತರಿಗೆ ಹಂಚಿಕೆ ಮಾಡಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಗಳ ಹೇಳಿಕೆಗೆ ತಾಯಿಯ ತಲೆದಂಡ; ಕೊಂಡ ಸುರೇಖಾರನ್ನು ಸಂಪುಟದಿಂದ ವಜಾಗೊಳಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಇದರೊಂದಿಗೆ, ತೆಲಂಗಾಣ ಪ್ರತ್ಯೇಕ ರಾಜ್ಯ ಹೋರಾಟದ ಸಮಯದಲ್ಲಿ ಪ್ರಾಣತ್ಯಾಗ ಮಾಡಿದ ಅಮರವೀರರ ಕುಟುಂಬಗಳಿಗಾಗಿ ಈ ಭೂಮಿಯಲ್ಲಿ ‘ಆವಾಸಸ್ಥಾನ ಕಾಲೋನಿ’ ನಿರ್ಮಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೆಪ್ಟೆಂಬರ್ 16ರಂದು ಬಿಆರ್‌ಎಸ್ ನಾಯಕರು ಸುಮಾರು 1 ಲಕ್ಷ ಕೋಟಿ ರೂ. ಮೌಲ್ಯದ ಜಮೀನನ್ನು ಲೂಟಿ ಮಾಡಿದೆ ಎಂದು ರೇವಂತ್ ರೆಡ್ಡಿ ಆರೋಪಿಸಿದ್ದರು ಹಾಗೂ ಈ ಅಕ್ರಮಗಳ ಕುರಿತು ಸಮಗ್ರ ತನಿಖೆಗೆ ಆದೇಶಿಸಿದ್ದರು.

ಕೆಸಿಆರ್ ಮತ್ತು ಅವರ ಕುಟುಂಬವು ತೆಲಂಗಾಣ ಭೂ ಸುಧಾರಣೆ (ಕೃಷಿ ಹಿಡುವಳಿಗಳ ಮೇಲಿನ ಗರಿಷ್ಠ ಮಿತಿ) ಕಾಯ್ದೆಯಡಿ ನಿಗದಿಪಡಿಸಿದ ಮಿತಿಗಿಂತ ಹೆಚ್ಚಿನ ಜಮೀನನ್ನು ಹೊಂದಿದೆ ಎಂದು ಕಳೆದ ತಿಂಗಳು ರಾಜ್ಯ ವಿಧಾನಸಭೆಯಲ್ಲಿ ಆರೋಪಿಸಿದ್ದ ರೇವಂತ್ ರೆಡ್ಡಿ, ಈ ಕುರಿತು ತನಿಖೆಗೆ ಸಮಿತಿಯನ್ನು ರಚಿಸಿದ್ದರು. ಅಲ್ಲದೆ ಕೆಸಿಆರ್ ಮತ್ತು ಅವರ ಕುಟುಂಬದವರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ: ಉದ್ಯೋಗದ ಹೆಸರಲ್ಲಿ ರಷ್ಯಾಕ್ಕೆ ಕರೆದೊಯ್ದು ಉಕ್ರೇನ್ ಯುದ್ಧಕ್ಕೆ ತಳ್ಳಿದ ಜಾಲ: ತೆಲಂಗಾಣದ ನಾಲ್ವರನ್ನು ರಕ್ಷಿಸಲು ಕುಟುಂಬಗಳ ಮೊರೆ

ಎರ್ರಾವೆಲ್ಲಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ “ಕಾಣೆಯಾದ” 45 ಎಕರೆ ಜಮೀನನ್ನು ಪತ್ತೆ ಹಚ್ಚುವಂತೆ ರೇವಂತ್ ರೆಡ್ಡಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಸರ್ವೆ ಸಂಖ್ಯೆ 325ರ ಅಡಿಯಲ್ಲಿ ಗುರುತಿಸಲಾದ ಸರ್ಕಾರಿ ಜಮೀನನ್ನು ಅರ್ಹ ಸ್ಥಳೀಯ ರೈತರಿಗೆ ಹಂಚಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.

ವಿಧಾನಸಭೆಯಲ್ಲಿ ಸರ್ಕಾರದ ವಾಗ್ದಾಳಿ:

ವಿಧಾನಸಭೆಯಲ್ಲಿ ಮಾತನಾಡಿದ್ದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಂದಿನ ಬಿಆರ್‌ಎಸ್ ಸರ್ಕಾರವು ಜಮೀನು ಹಂಚಿಕೆ ಹಾಗೂ ಕಂದಾಯ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ ಮತ್ತು ಭ್ರಷ್ಟಾಚಾರ ಎಸಗಿದೆ ಎಂದು ನೇರ ಆರೋಪ ಮಾಡಿದ್ದರು. “ಬಿಆರ್‌ಎಸ್ ನಾಯಕರು, ಅವರ ಬೆಂಬಲಿಗರು ಮತ್ತು ಬಂಧುಗಳು ಸುಮಾರು 1 ಲಕ್ಷ ಕೋಟಿ ರೂ. ಮೌಲ್ಯದ ಜಮೀನನ್ನು ಕಬಳಿಸಿದ್ದಾರೆ. ಈ ಸತ್ಯ ಹೊರಬರಬೇಕು, ತನಿಖೆಯಾಗಬೇಕು ಹಾಗೂ ಬಡವರಿಗೆ ನ್ಯಾಯ ಸಿಗಬೇಕು” ಎಂದು ಅವರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!