AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಯನ್ನು ಕಟಿಂಗ್ ಶಾಪ್​ಗೆ ಕರೆದೊಯ್ದು ತಲೆ ಬೋಳಿಸಿದ ಕಾಲೇಜು ಶಿಕ್ಷಕ!

ವಿದ್ಯಾರ್ಥಿಯ ತಲೆ ಬೋಳಿಸಿದ್ದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರೊಬ್ಬರು ವಿದ್ಯಾರ್ಥಿಯನ್ನು ಕ್ಷೌರದ ಅಂಗಡಿಗೆ ಕರೆದೊಯ್ದು ತಲೆ ಬೋಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿಯನ್ನು ಕಟಿಂಗ್ ಶಾಪ್​ಗೆ ಕರೆದೊಯ್ದು ತಲೆ ಬೋಳಿಸಿದ ಕಾಲೇಜು ಶಿಕ್ಷಕ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Nov 18, 2024 | 4:37 PM

Share

ಹೈದರಾಬಾದ್: ತೆಲಂಗಾಣದ ಸರ್ಕಾರಿ ವೈದ್ಯಕೀಯ ಕಾಲೇಜು ಉಪನ್ಯಾಸಕರೊಬ್ಬರು ವಿದ್ಯಾರ್ಥಿಯನ್ನು ಕ್ಷೌರಿಕನ ಅಂಗಡಿಗೆ ಕರೆದೊಯ್ದು, ಅವನ ತಲೆ ಬೋಳಿಸಿದ್ದಾರೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಯ ತಲೆ ಬೋಳಿಸಿದ್ದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ನವೆಂಬರ್ 12ರಂದು ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಆರೋಗ್ಯ ಸಚಿವ ದಾಮೋದರ್ ರಾಜ ನರಸಿಂಹ ಅವರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಇದು ರ್ಯಾಗಿಂಗ್ ಅಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Train Derails: ತೆಲಂಗಾಣದಲ್ಲಿ ಹಳಿ ತಪ್ಪಿದ 11 ರೈಲ್ವೆ ಬೋಗಿಗಳು, ದೆಹಲಿ-ಚೆನ್ನೈ ಮಾರ್ಗದಲ್ಲಿ ಸಂಚಾರ ಸ್ಥಗಿತ

ತೆಲಂಗಾಣ ಸರ್ಕಾರದ ಅಧಿಕಾರಿಗಳ ಪ್ರಕಾರ, ಆರಂಭದಲ್ಲಿ ಸಂಸ್ಥೆಯ ಹಾಸ್ಟೆಲ್‌ನಲ್ಲಿರುವ ಕೆಲವು ಸೀನಿಯರ್​ಗಳು ಮೊದಲ ವರ್ಷದ ವಿದ್ಯಾರ್ಥಿಯ ಹೇರ್​ಸ್ಟೈಲ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗೆ ಇರಬೇಕಾದ ಹಾಗಿಲ್ಲ ಎಂದು ಹೇಳಿದರು. ಆತನಿಗೆ ಕೂದಲು ಟ್ರಿಮ್ ಮಾಡಲು ಸೂಚಿಸಿದರು.

ವಿದ್ಯಾರ್ಥಿಯು ತನ್ನ ಕೂದಲನ್ನು ಟ್ರಿಮ್ ಮಾಡಿದ ನಂತರ ಹಾಸ್ಟೆಲ್ ಉಸ್ತುವಾರಿಯಾಗಿದ್ದ ಆ ಕಾಲೇಜಿನ ಉಪನ್ಯಾಸಕ ಈ ಹೇರ್​ಸ್ಟೈಲ್ ವಿಚಿತ್ರವಾಗಿದೆ ಎಂದು ಹೇಳಿ ಆತನನ್ನು ಸಲೂನ್‌ಗೆ ಕರೆದೊಯ್ದು ತಲೆ ಬೋಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ವಿಷಯ ಪ್ರಾಂಶುಪಾಲರ ಗಮನಕ್ಕೆ ಬಂದ ನಂತರ, ಶನಿವಾರ ಆ ಉಪನ್ಯಾಸಕರನ್ನು ಹಾಸ್ಟೆಲ್‌ನಿಂದ ತೆಗೆದುಹಾಕಲು ಆದೇಶಿಸಿದರು. ಈ ಘಟನೆಯ ಕುರಿತು ತನಿಖೆಗಾಗಿ ಸಮಿತಿಯನ್ನು ಸಹ ರಚಿಸಿದರು.

ಇದನ್ನೂ ಓದಿ: Viral Video: ಟೆರೇಸ್‌ನಲ್ಲಿ ಕಾರಿನಂತೆ ಕಾಣುವ ನೀರಿನ ಟ್ಯಾಂಕ್, ವಿಡಿಯೋ ವೈರಲ್

ಸಹಾಯಕ ಪ್ರಾಧ್ಯಾಪಕರು ಇಂತಹ ಚಟುವಟಿಕೆಯಲ್ಲಿ ತೊಡಗುವುದು ಒಳ್ಳೆಯದಲ್ಲ ಎಂದು ಪ್ರಾಂಶುಪಾಲರು ಹೇಳಿದರು. ಆದರೆ, ಆ ಉಪನ್ಯಾಸಕರ ಪ್ರಕಾರ, ಆ ವಿದ್ಯಾರ್ಥಿಯನ್ನು ಶಿಸ್ತುಬದ್ಧಗೊಳಿಸುವುದು ಮಾತ್ರ ಅವರ ಉದ್ದೇಶವಾಗಿತ್ತು. ಹೀಗಾಗಿ, ಈ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ