AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilisai Soundararajan resigns: ಚುನಾವಣೆ ಹೊಸ್ತಿಲಲ್ಲಿ, ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ

ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Tamilisai Soundararajan resigns: ಚುನಾವಣೆ ಹೊಸ್ತಿಲಲ್ಲಿ, ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ
ತಮಿಳಿಸೈ
ನಯನಾ ರಾಜೀವ್
|

Updated on:Mar 18, 2024 | 11:48 AM

Share

ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್(Tamilisai Soudararajan) ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆ(Lok Sabha Election)ಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುದುಚೇರಿಯಲ್ಲಿ ಎನ್​ಆರ್​ ಕಾಂಗ್ರೆಸ್​-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕೆಲವು ದಿನಗಳ ಹಿಂದೆ ತಮಿಳ್​ ಸಾಯಿ ಸೌಂದರರಾಜನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಅವರು ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದರು ಮತ್ತು ಸೋಮವಾರ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಕಳುಹಿಸಿದರು. ಲೋಕಸಭೆ ಚುನಾವಣೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅವರು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: Lok Sabha Election: ಉಚಿತ ನಿವೇಶನಗಳನ್ನು ಹಂಚಲಿದೆ ಕಾಂಗ್ರೆಸ್​, ಭರವಸೆ ಕೊಟ್ಟ ಭೂಪೇಂದ್ರ ಸಿಂಗ್ ಹೂಡಾ

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಒಂದೊಂದಾಗಿ ಬಿಡುಗಡೆ ಮಾಡುತ್ತಿದೆ. ಇದಕ್ಕೂ ಮುನ್ನ ಬಿಜೆಪಿ ಮೊದಲ ಹಂತದಲ್ಲಿ 195 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ವಾರಣಾಸಿಯಲ್ಲಿ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗುಜರಾತ್‌ನ ಗಾಂಧಿನಗರದಲ್ಲಿ ಮತ್ತೆ ಸ್ಪರ್ಧಿಸುತ್ತಿರುವ ಗೃಹ ಸಚಿವ ಅಮಿತ್ ಶಾ ಅವರ ಹೆಸರುಗಳು ಪಟ್ಟಿಯಲ್ಲಿ ಸೇರಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಕ್ನೋದಿಂದ ಮತ್ತು ಸ್ಮೃತಿ ಇರಾನಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ, ಸ್ಮೃತಿ ಇರಾನಿ 2019 ರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ರಾಜಸ್ಥಾನದ ಕೋಟಾ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

28 ಮಹಿಳೆಯರು, 50 ವರ್ಷದೊಳಗಿನ 47 ಮುಖಂಡರು, ಒಬಿಸಿ ಸಮುದಾಯದ 57 ಸದಸ್ಯರು, 34 ಕೇಂದ್ರ ಮತ್ತು ರಾಜ್ಯ ಸಚಿವರು ಮತ್ತು ಇಬ್ಬರು ಮಾಜಿ ಮುಖ್ಯಮಂತ್ರಿಗಳು ಈ ಪಟ್ಟಿಯಲ್ಲಿ ಸೇರಿದ್ದಾರೆ. 195 ರಲ್ಲಿ, 51 ಪ್ರಮುಖ ರಾಜ್ಯವಾದ ಉತ್ತರ ಪ್ರದೇಶದಿಂದ, 20 ಪಶ್ಚಿಮ ಬಂಗಾಳದಿಂದ ಮತ್ತು ಐದು ದೆಹಲಿಯಿಂದ ಬಂದವರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:36 am, Mon, 18 March 24