Mahila Shakti canteens: ರಾಜ್ಯದಾದ್ಯಂತ 150 ‘ಮಹಿಳಾ ಶಕ್ತಿ’ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಿದೆ ತೆಲಂಗಾಣ ಸರ್ಕಾರ

ರಾಜ್ಯದಲ್ಲಿ ಮಹಿಳಾ ಸಂಘಟನೆಗಳನ್ನು ಬಲಪಡಿಸುವ ಉದ್ದೇಶವನ್ನು ಮುಖ್ಯಮಂತ್ರಿಗಳು ಹೊಂದಿದ್ದಾರೆ ಎಂದು ತಿಳಿಸಿದ ಮುಖ್ಯ ಕಾರ್ಯದರ್ಶಿ, ಎಲ್ಲಾ ಸರ್ಕಾರಿ ಕಚೇರಿಗಳು, ಜಿಲ್ಲಾಧಿಕಾರಿಗಳು, ಪ್ರವಾಸಿ ತಾಣಗಳು, ವಿವಿಧ ದೇವಸ್ಥಾನಗಳು, ಬಸ್ ನಿಲ್ದಾಣಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಮಹಿಳೆಯರ ನೆರವಿನೊಂದಿಗೆ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

Mahila Shakti canteens: ರಾಜ್ಯದಾದ್ಯಂತ 150 ‘ಮಹಿಳಾ ಶಕ್ತಿ’ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಿದೆ ತೆಲಂಗಾಣ ಸರ್ಕಾರ
ಶಾಂತಿ ಕುಮಾರಿ
Follow us
|

Updated on:Jun 14, 2024 | 11:06 AM

ಹೈದರಾಬಾದ್ ಜೂನ್ 14: ತೆಲಂಗಾಣದಾದ್ಯಂತ (Telangana) ಕನಿಷ್ಠ 150 “ಮಹಿಳಾ ಶಕ್ತಿ” ಕ್ಯಾಂಟೀನ್‌ಗಳನ್ನು (Mahila Shakti canteen) ಸ್ಥಾಪಿಸಲು ಮತ್ತು ಆಹಾರ ತಿನಿಸುಗಳ ನಿರ್ವಹಣೆಯ ಜವಾಬ್ದಾರಿಯನ್ನು ಮಹಿಳಾ ಸಂಘಟನೆಗಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ (A Revanth Reddy) ಅವರ ನಿರ್ದೇಶನದಂತೆ ಮುಖ್ಯ ಕಾರ್ಯದರ್ಶಿ ಶಾಂತಿ ಕುಮಾರಿ ಅವರು ಗುರುವಾರ ಸಚಿವಾಲಯದಲ್ಲಿ “ಮಹಿಳಾ ಶಕ್ತಿ – ಕ್ಯಾಂಟೀನ್ ಸೇವೆಗಳು” ಕುರಿತು ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, ಕ್ಯಾಂಟೀನ್‌ಗಳ ಕಾರ್ಯನಿರ್ವಹಣೆ, ವ್ಯವಸ್ಥೆ ಮತ್ತು ಅವುಗಳನ್ನು ಸ್ಥಾಪಿಸಲು ಅಗತ್ಯವಿರುವ ಸ್ಥಳಾವಕಾಶದ ಕುರಿತು ವಿವರವಾದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಆಯುಕ್ತರಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮಹಿಳಾ ಸಂಘಟನೆಗಳನ್ನು ಬಲಪಡಿಸುವ ಉದ್ದೇಶವನ್ನು ಮುಖ್ಯಮಂತ್ರಿಗಳು ಹೊಂದಿದ್ದಾರೆ ಎಂದು ತಿಳಿಸಿದ ಮುಖ್ಯ ಕಾರ್ಯದರ್ಶಿ, ಎಲ್ಲಾ ಸರ್ಕಾರಿ ಕಚೇರಿಗಳು, ಜಿಲ್ಲಾಧಿಕಾರಿಗಳು, ಪ್ರವಾಸಿ ತಾಣಗಳು, ವಿವಿಧ ದೇವಸ್ಥಾನಗಳು, ಬಸ್ ನಿಲ್ದಾಣಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಮಹಿಳೆಯರ ನೆರವಿನೊಂದಿಗೆ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ನಡೆಯುತ್ತಿರುವ ಕ್ಯಾಂಟೀನ್‌ಗಳು ಮತ್ತು ಪಶ್ಚಿಮ ಬಂಗಾಳದಲ್ಲಿ “ದೀದಿ ಕಿ ರಸೋಯಿ” ಯಶಸ್ವಿ ನಿರ್ವಹಣೆ ಕುರಿತು ಅಧ್ಯಯನವನ್ನು ಮಾಡಲಾಗಿದೆ. ಇನ್ನೆರಡು ವರ್ಷಗಳಲ್ಲಿ ಕನಿಷ್ಠ 150 ಕ್ಯಾಂಟೀನ್‌ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಈ ಕ್ಯಾಂಟೀನ್‌ಗಳ ನಿರ್ವಹಣೆಯನ್ನು ಗ್ರಾಮೀಣ ಮಹಿಳಾ ಗುಂಪುಗಳಿಗೆ ವಹಿಸಲಾಗುವುದು. ಈ ಗುಂಪುಗಳಿಗೆ ಕ್ಯಾಂಟೀನ್‌ಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ವಿಶೇಷ ತರಬೇತಿಯನ್ನು ನೀಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

ಪ್ರಧಾನ ಕಂದಾಯ ಕಾರ್ಯದರ್ಶಿ ನವೀನ್ ಮಿತ್ತಲ್, ಪಂಚಾಯತ್ ರಾಜ್ ಆಯುಕ್ತೆ ಅನಿತಾ ರಾಮಚಂದ್ರನ್, ಆರೋಗ್ಯ ಆಯುಕ್ತ ಆರ್.ವಿ.ಕರ್ಣನ್, ದತ್ತಿ ಆಯುಕ್ತ ಹನುಮಂತ ರಾವ್, ಪ್ರವಾಸೋದ್ಯಮ ನಿರ್ದೇಶಕಿ ನಿಖಿಲಾ, ಪ್ರವಾಸೋದ್ಯಮ ನಿಗಮದ ಎಂಡಿ ರಮೇಶ್ ನಾಯ್ಡು ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Parliament Monsoon Session 2024: ಜುಲೈ 22 ರಿಂದ ಆಗಸ್ಟ್​ 9ರವರೆಗೆ ಸಂಸತ್ ಮುಂಗಾರು ಅಧಿವೇಶನ

ಸರ್ಕಾರಿ ಕಚೇರಿಗಳು, ಜಿಲ್ಲಾಧಿಕಾರಿ ಕಚೇರಿಗಳು, ಪ್ರವಾಸಿ ತಾಣಗಳು, ದೇವಸ್ಥಾನಗಳು ಇತ್ಯಾದಿಗಳಲ್ಲಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು. ಈ ಕ್ಯಾಂಟೀನ್‌ಗಳ ನಿರ್ವಹಣೆ ಗ್ರಾಮೀಣ ಮಹಿಳಾ ಗುಂಪುಗಳದ್ದು. ಈ ಮಹಿಳಾ ಗುಂಪುಗಳ ಸದಸ್ಯರಿಗೆ ಕ್ಯಾಂಟೀನ್‌ಗಳ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Fri, 14 June 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು