Breaking News ಬಿಜೆಪಿಯಿಂದ ಟಿಆರ್​​ಎಸ್ ಶಾಸಕರ ಖರೀದಿ ಯತ್ನ ಆರೋಪದ ತನಿಖೆ ನಡೆಸಲು ತೆಲಂಗಾಣ ಹೈಕೋರ್ಟ್ ಅನುಮತಿ

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷ ಟಿಆರ್‌ಎಸ್ ಆರೋಪದ ಕುರಿತು ಪೊಲೀಸರು ತನಿಖೆ ಮುಂದುವರಿಸಬಹುದು ಎಂದು ತೆಲಂಗಾಣ ಹೈಕೋರ್ಟ್

Breaking News ಬಿಜೆಪಿಯಿಂದ ಟಿಆರ್​​ಎಸ್ ಶಾಸಕರ ಖರೀದಿ ಯತ್ನ ಆರೋಪದ ತನಿಖೆ ನಡೆಸಲು ತೆಲಂಗಾಣ ಹೈಕೋರ್ಟ್ ಅನುಮತಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 08, 2022 | 6:26 PM

ತಮ್ಮ ನಾಲ್ವರು ಶಾಸಕರನ್ನು ಪಕ್ಷ ಬದಲಾಯಿಸಲು ದಲ್ಲಾಳಿಗಳು ಸಂಪರ್ಕಿಸಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (KCR) ಅವರ ಪಕ್ಷ ಟಿಆರ್‌ಎಸ್(TRS) ಆರೋಪದ ಕುರಿತು ಪೊಲೀಸರು ತನಿಖೆ ಮುಂದುವರಿಸಬಹುದು ಎಂದು ತೆಲಂಗಾಣ ಹೈಕೋರ್ಟ್(Telangana High Court)  ಹೇಳಿದೆ. ಪ್ರತಿಸ್ಪರ್ಧಿ ಬಿಜೆಪಿ ತೆಲಂಗಾಣ ಹೈಕೋರ್ಟ್‌ನಲ್ಲಿ ಕೇಂದ್ರೀಯ ತನಿಖಾ ದಳದಂತಹ ನಿಷ್ಪಕ್ಷ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿತ್ತು. ಇದಾದ ನಂತರ ನ್ಯಾಯಾಲಯವು ಬಿಜೆಪಿ ಅರ್ಜಿಯ ವಿಚಾರಣೆಯ ಬಾಕಿ ಇದ್ದುದರಿಂದ ರಾಜ್ಯ ಪೊಲೀಸ್ ತನಿಖೆಯನ್ನು ತಡೆಹಿಡಿದಿತ್ತು. ಇದೀಗ ನ್ಯಾಯಾಲಯವು ಪೊಲೀಸ್ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ತೆಗೆದುಹಾಕಿದೆ.

ನವೆಂಬರ್ 18 ರಂದು ನಿಷ್ಪಕ್ಷಪಾತ ತನಿಖೆಯ ಅಗತ್ಯತೆಯ ಬಗ್ಗೆ ಬಿಜೆಪಿಯ ಕಳವಳಕ್ಕೆ ಪ್ರತಿಕ್ರಿಯಿಸುವಂತೆ ತೆಲಂಗಾಣ ರಾಷ್ಟ್ರ ಸಮಿತಿ ಅಥವಾ ಟಿಆರ್ಎಸ್ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್ ನೀಡಿದೆ. ಕೆ.ಚಂದ್ರಶೇಖರ ರಾವ್, ಅಥವಾ ಕೆಸಿಆರ್, 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿಟಿಆರ್‌ಎಸ್ ಅನ್ನು ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಿದ್ದಾರೆ.

ಕಳೆದ ವಾರ, ಕೆಸಿಆರ್ ಅನಿರೀಕ್ಷಿತ ಸುದ್ದಿಗೋಷ್ಠಿ ಕರೆದಿದ್ದು ಬಿಜೆಪಿ ವಿರುದ್ಧ ತಮ್ಮ ಪಕ್ಷದ ಶಾಸಕರನ್ನು ಖರೀದಿಸಲು ಯತ್ನಿಸಿದರು ಎಂಬ ಆರೋಪವನ್ನು ಸಾಬೀತುಪಡಿಸುವ ವಿಡಿಯೊಗಳ ಸರಣಿಯನ್ನು ಪ್ರದರ್ಶಿಸಿದರು. ಸುದ್ದಿಗೋಷ್ಠಿಯಲ್ಲಿ ಐದು ನಿಮಿಷಗಳ ವಿಡಿಯೊವನ್ನು ಅವರು ಪ್ರದರ್ಶಿಸಿದರು. “ದೆಹಲಿ ದಲ್ಲಾಳಿಗಳು” ತಮ್ಮ ಪಕ್ಷದ ನಾಲ್ವರು ಶಾಸಕರಿಗೆ ಲಂಚ ನೀಡಲು ಯತ್ನಿಸಿದ್ದಾರೆ ಎಂದು ಕೆಸಿಆರ್ ಆರೋಪಿಸಿದ್ದಾರೆ.

ಆಪರೇಷನ್ ಯತ್ನದ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ, ಇದು ಮುಖ್ಯಮಂತ್ರಿಯವರದ್ದೇ ಚಿತ್ರಕಥೆ, ನಿರ್ದೇಶನ ಮತ್ತು ನಿರ್ಮಾಣದ” ನಾಟಕ ಎಂದು ಹೇಳಿದೆ.

Published On - 5:52 pm, Tue, 8 November 22

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು