ತೆಲಂಗಾಣದಲ್ಲಿ ಕಿರಿಯ ವೈದ್ಯರ ಮುಷ್ಕರ; ಒಪಿಡಿ, ಆಪರೇಷನ್​ಗಳಿಗೆ ತೊಂದರೆ

ತೆಲಂಗಾಣದ ಕಿರಿಯ ವೈದ್ಯರು ಹೊರರೋಗಿಗಳ (OPD) ಸೇವೆಗಳು, ಶಸ್ತ್ರಚಿಕಿತ್ಸೆಗಳು ಮತ್ತು ವಾರ್ಡ್ ಕರ್ತವ್ಯಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ವೈದ್ಯರ ಮೇಲೆ ಪರಿಣಾಮ ಬೀರುವ ಹಲವಾರು ಬಗೆಹರಿಯದ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿದ್ದಾರೆ.

ತೆಲಂಗಾಣದಲ್ಲಿ ಕಿರಿಯ ವೈದ್ಯರ ಮುಷ್ಕರ; ಒಪಿಡಿ, ಆಪರೇಷನ್​ಗಳಿಗೆ ತೊಂದರೆ
ತೆಲಂಗಾಣದಲ್ಲಿ ಕಿರಿಯ ವೈದ್ಯರ ಮುಷ್ಕರ
Follow us
ಸುಷ್ಮಾ ಚಕ್ರೆ
|

Updated on: Jun 24, 2024 | 3:47 PM

ಹೈದರಾಬಾದ್: ತೆಲಂಗಾಣದಾದ್ಯಂತ (Telangana) ಕಿರಿಯ ವೈದ್ಯರು ಮಾಡುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಕರೆಯಿಂದ ಇಂದು (ಸೋಮವಾರ) ಬೆಳಗ್ಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಆರೋಗ್ಯ ಸೇವೆಗಳಿಗೆ ಹೊಡೆತ ಬಿದ್ದಿದೆ. ಹೈದರಾಬಾದ್‌ನ (Hyderabad) ಉಸ್ಮಾನಿಯಾ ವೈದ್ಯಕೀಯ ಕಾಲೇಜಿನಲ್ಲಿ (Osmania Medical College) ಮುಷ್ಕರ ನಡೆಸುತ್ತಿದ್ದಾರೆ. ತೆಲಂಗಾಣ ಜೂನಿಯರ್ ಡಾಕ್ಟರ್ಸ್ ಅಸೋಸಿಯೇಷನ್ ​​(ಟಿಜೆಯುಡಿಎ) ಸದಸ್ಯರು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಕರೆಯಿಂದಾಗಿ ಸಿಬ್ಬಂದಿ ಕೊರತೆಯ ಬಿಕ್ಕಟ್ಟನ್ನು ನಿವಾರಿಸಲು, ಆಸ್ಪತ್ರೆಯ ಆಡಳಿತ ಮಂಡಳಿಗಳು ಬೋಧಕ ಸಿಬ್ಬಂದಿ ಸೇರಿದಂತೆ ಎಲ್ಲಾ ಹಿರಿಯ ಆರೈಕೆದಾರರಿಗೆ ತಮ್ಮ ರಜೆಯನ್ನು ರದ್ದುಗೊಳಿಸಿ ತಮ್ಮ ನಿಯಮಿತ ಕರ್ತವ್ಯಕ್ಕೆ ವರದಿ ಮಾಡುವಂತೆ ಸೂಚಿಸಿವೆ.

ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಇಂದು ಹೊರರೋಗಿ ವಿಭಾಗವು ಕಾರ್ಯ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆದರೆ, ಮೆಡಿಕೋ ಮುಷ್ಕರದಿಂದಾಗಿ 50ಕ್ಕೂ ಹೆಚ್ಚು ಆಪರೇಷನ್​ಗಳನ್ನು ಮುಂದೂಡಬೇಕಾಯಿತು. ಇಂದು ಮುಂಜಾನೆಯಿಂದಲೇ ಕಿರಿಯ ವೈದ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಒಪಿ ಮತ್ತು ಐಚ್ಛಿಕ ಶಸ್ತ್ರಚಿಕಿತ್ಸೆಗಳನ್ನು ಬಹಿಷ್ಕರಿಸಿದ್ದಾರೆ.

ಇದನ್ನೂ ಓದಿ: Viral: ಗೋ ಹತ್ಯೆ ಮಾಡುವವರಿಗೆ ಚಿಕಿತ್ಸೆ ನೀಡಬೇಡಿ, ಆಸ್ಪತ್ರೆಯ ಮೇಲೆ ಗುಂಪಿನ ದಾಳಿ, ಕಣ್ಣೀರು ಹಾಕಿದ ವೈದ್ಯರು 

ಕಿರಿಯ ವೈದ್ಯರು ತಮ್ಮ ಸ್ಟೈಫಂಡ್ ಅನ್ನು ನಿಯಮಿತವಾಗಿ ಪಾವತಿಸಲು ವ್ಯವಸ್ಥೆ, ಉತ್ತಮ ಹಾಸ್ಟೆಲ್ ಸೌಲಭ್ಯಗಳು, ಆಸ್ಪತ್ರೆ ಆವರಣದೊಳಗೆ ಭದ್ರತೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಇಂದು ಮಧ್ಯಾಹ್ನ ಅಥವಾ ಸಂಜೆ ಮುಷ್ಕರ ನಿರತ ವೈದ್ಯರೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಹಿರಿಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶಂಸಿದ ಭಾರತೀಯ ವೈದ್ಯಕೀಯ ಸಂಘ

ತೆಲಂಗಾಣದಲ್ಲಿ ಕಿರಿಯ ವೈದ್ಯರು ರಾಜ್ಯಾದ್ಯಂತ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸುತ್ತಿದ್ದಾರೆ. OPD ಸೇವೆಗಳು, ಶಸ್ತ್ರಚಿಕಿತ್ಸೆಗಳನ್ನು ಬಹಿಷ್ಕರಿಸಿದ್ದಾರೆ. ವೈದ್ಯರ ಮೇಲೆ ಪರಿಣಾಮ ಬೀರುವ ಹಲವಾರು ಬಗೆಹರಿಯದ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿದ್ದಾರೆ. ಅವರ ಪ್ರಮುಖ ಬೇಡಿಕೆಗಳಲ್ಲಿ ಸಕಾಲದಲ್ಲಿ ಸ್ಟೈಫಂಡ್ ವಿತರಣೆಗಾಗಿ ಗ್ರೀನ್ ಚಾನಲ್ ಸ್ಥಾಪನೆ ಮುಂತಾದವುಗಳು ಸೇರಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್