ತೆಲಂಗಾಣದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಸಾವು: ಔಷಧಕ್ಕೂ ಸಾವಿಗೂ ಸಂಬಂಧ ಇಲ್ಲ ಎಂದ ವೈದ್ಯರು

ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ನಿರ್ಮಲ್​ ಜಿಲ್ಲೆಯಲ್ಲಿ ಮಂಗಳವಾರ 11:30ಕ್ಕೆ ಲಸಿಕೆ ನೀಡಲಾಗಿತ್ತು. ಮಧ್ಯಾಹ್ನ 2:30ರ ಸುಮಾರಿಗೆ ಆತನಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ ಅವರು ಮೃತಪಟ್ಟಿದ್ದಾರೆ.

ತೆಲಂಗಾಣದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಸಾವು: ಔಷಧಕ್ಕೂ ಸಾವಿಗೂ ಸಂಬಂಧ ಇಲ್ಲ ಎಂದ ವೈದ್ಯರು
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 20, 2021 | 7:38 PM

ಹೈದರಾಬಾದ್: ತೆಲಂಗಾಣದ ನಿರ್ಮಲ್​ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಪಡೆದ 42 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈತನ ಸಾವಿಗೂ ಕೊರೊನಾ ಲಸಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ನಿರ್ಮಲ್​ ಜಿಲ್ಲೆಯಲ್ಲಿ ಮಂಗಳವಾರ 11:30ಕ್ಕೆ ಲಸಿಕೆ ನೀಡಲಾಗಿತ್ತು. ಮಧ್ಯಾಹ್ನ 2:30ರ ಸುಮಾರಿಗೆ ಆತನಿಗೆ ಎದೆನೋವು ಕಾಣಿಸಿಕೊಂಡಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಬುಧವಾರ ಬೆಳಗ್ಗೆ 5:30ರ ಸುಮಾರಿಗೆ ಅವರು ಮೃತಪಟ್ಟರು.

ಲಸಿಕೆ ತೆಗೆದುಕೊಂಡಿದ್ದಕ್ಕೂ, ಅವರಿಗೆ ಹೃದಯಾಘಾತ ಆಗಿದ್ದಕ್ಕೂ ಪ್ರಾಥಮಿಕ ಪರೀಕ್ಷೆ ಪ್ರಕಾರ ಯಾವುದೇ ಸಂಬಂಧ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮೊರದಾಬಾದ್​ನಲ್ಲಿ ಭಾನುವಾರ ರಾತ್ರಿ ಮಹಿಪಾಲ್​ ಸಿಂಗ್ ಎಂಬುವವರು​ ಮೃತಪಟ್ಟಿದ್ದಾರೆ. ಶನಿವಾರ ಇವರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಬಳ್ಳಾರಿಯ 43 ವರ್ಷದ ವ್ಯಕ್ತಿ ಕೊರೊನಾ ಲಸಿಕೆ ಪಡೆದ ನಂತರ ಸಾವಿಗೀಡಾಗಿದ್ದರು. ಆದರೆ, ಇವರ ಸಾವಿಗೆ ಕೊರೊನಾ ಸೋಂಕು ಅಥವಾ ಲಸಿಕೆ ಕಾರಣವಲ್ಲ ಎಂದು ಸರ್ಕಾರ ತಿಳಿಸಿತ್ತು.

ಕೊರೊನಾ ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ, ಆದರೆ ಇದಕ್ಕೆ ಔಷಧ ಕಾರಣವಲ್ಲ: ಕೇಂದ್ರ ಸರ್ಕಾರ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್