ಹೈದರಾಬಾದ್: ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಪಡೆದ 42 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈತನ ಸಾವಿಗೂ ಕೊರೊನಾ ಲಸಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ನಿರ್ಮಲ್ ಜಿಲ್ಲೆಯಲ್ಲಿ ಮಂಗಳವಾರ 11:30ಕ್ಕೆ ಲಸಿಕೆ ನೀಡಲಾಗಿತ್ತು. ಮಧ್ಯಾಹ್ನ 2:30ರ ಸುಮಾರಿಗೆ ಆತನಿಗೆ ಎದೆನೋವು ಕಾಣಿಸಿಕೊಂಡಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಬುಧವಾರ ಬೆಳಗ್ಗೆ 5:30ರ ಸುಮಾರಿಗೆ ಅವರು ಮೃತಪಟ್ಟರು.
ಲಸಿಕೆ ತೆಗೆದುಕೊಂಡಿದ್ದಕ್ಕೂ, ಅವರಿಗೆ ಹೃದಯಾಘಾತ ಆಗಿದ್ದಕ್ಕೂ ಪ್ರಾಥಮಿಕ ಪರೀಕ್ಷೆ ಪ್ರಕಾರ ಯಾವುದೇ ಸಂಬಂಧ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ಭಾನುವಾರ ರಾತ್ರಿ ಮಹಿಪಾಲ್ ಸಿಂಗ್ ಎಂಬುವವರು ಮೃತಪಟ್ಟಿದ್ದಾರೆ. ಶನಿವಾರ ಇವರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಬಳ್ಳಾರಿಯ 43 ವರ್ಷದ ವ್ಯಕ್ತಿ ಕೊರೊನಾ ಲಸಿಕೆ ಪಡೆದ ನಂತರ ಸಾವಿಗೀಡಾಗಿದ್ದರು. ಆದರೆ, ಇವರ ಸಾವಿಗೆ ಕೊರೊನಾ ಸೋಂಕು ಅಥವಾ ಲಸಿಕೆ ಕಾರಣವಲ್ಲ ಎಂದು ಸರ್ಕಾರ ತಿಳಿಸಿತ್ತು.
ಕೊರೊನಾ ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ, ಆದರೆ ಇದಕ್ಕೆ ಔಷಧ ಕಾರಣವಲ್ಲ: ಕೇಂದ್ರ ಸರ್ಕಾರ