ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಬರ್ಬರ ಹತ್ಯೆ
ಕಾಲೇಶ್ವರಂ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಇತರರ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದ ವ್ಯಕ್ತಿಯು, ಬುಧವಾರ ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ, ಫೆಬ್ರವರಿ 20: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ರಾಜಲಿಂಗಮೂರ್ತಿ ಎಂಬುವವರು ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾಗಿದ್ದಾರೆ. ಕಾಲೇಶ್ವರಂ ಯೋಜನೆಯ ಭಾಗವಾಗಿ ಮೇಡಗಡ್ಡಿ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಸಿಆರ್ ಹಾಗೂ ಇತರರ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ ಈ ಘಟನೆ ರಾಜಕೀಯ ದ್ವೇಷದಿಂದ ನಡೆದಿದ್ದಲ್ಲ ಎಂದು ಪೊಲೀಸರು ಹೇಳಿದ್ದಾರೆ. ಭೂ ವಿವಾದದ ಹಿನ್ನೆಲೆಯಲ್ಲಿ 50 ರ ವಯಸ್ಸಿನ ಎನ್. ರಾಜಲಿಂಗಮೂರ್ತಿ ಅವರನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಇರಿದು ಕೊಂದಿದ್ದಾರೆ. ಬುಧವಾರ ಸಂಜೆ 7.30 ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಹೋಗುತ್ತಿದ್ದ ರಾಜಲಿಂಗಮೂರ್ತಿ ಅವರನ್ನು ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಇರಿದು ಕೊಂದಿದ್ದಾರೆ.
ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇಡಿಗಡ್ಡ ಬ್ಯಾರೇಜ್‌ನ ಕೆಲವು ಪಿಲ್ಲರ್ಗಳು ಮುಳುಗಿದ ಬಳಿಕ ಕೆಸಿಆರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ರಾಜಲಿಂಗಮೂರ್ತಿ ಅವರು ಅಕ್ಟೋಬರ್ 2023 ರಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಮತ್ತಷ್ಟು ಓದಿ: ಹೈಕೋರ್ಟ್‌ನಲ್ಲಿ ವಾದಿಸುತ್ತಿದ್ದಾಗಲೇ ಹೃದಯಾಘಾತದಿಂದ ಹಿರಿಯ ವಕೀಲ ಸಾವು
ಕೆಸಿಆರ್ ಮತ್ತು ಅವರ ಸೋದರಳಿಯ ಮತ್ತು ಮಾಜಿ ಸಚಿವ ಟಿ ಹರೀಶ್ ರಾವ್ ನಂತರ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು, ಕಳೆದ ವರ್ಷ ಡಿಸೆಂಬರ್‌ನಲ್ಲಿ ಜಯಶಂಕರ್ ಭೂಪಾಲಪಲ್ಲಿಯ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ತಮ್ಮ ವಿರುದ್ಧ ಅರ್ಜಿ ಸಲ್ಲಿಸಲು ಅನುಮತಿ ನೀಡಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:31 am, Thu, 20 February 25