Hyderabad Fire: ಹೈದರಾಬಾದ್‌ನ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳ ದೌಡು

ಹೈದರಾಬಾದ್‌ನ ರಾಮ್‌ಗೋಪಾಲ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Hyderabad Fire: ಹೈದರಾಬಾದ್‌ನ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳ ದೌಡು
ತೆಲಂಗಾಣದಲ್ಲಿ ಕಟ್ಟಡಕ್ಕೆ ಬೆಂಕಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 19, 2023 | 4:23 PM

ತೆಲಂಗಾಣ: ಹೈದರಾಬಾದ್‌ನ (Hyderabad) ರಾಮ್‌ಗೋಪಾಲ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಅಂತಸ್ತಿನ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಅಗ್ನಿಶಾಮಕ ದಳ ಹಾಗೂ ಇತರ ಅಧಿಕಾರಿಗಳು ಬೆಂಕಿ ನಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅದೊಂದು ಕಮರ್ಷಿಯಲ್ ಕಾಂಪ್ಲೆಕ್ಸ್, ಒಳಗೆ ಸಾಕಷ್ಟು ಫ್ಯಾಬ್ರಿಕ್ ಮೆಟೀರಿಯಲ್ , ನೈಟ್ ವೇರ್ ಇತ್ತು. ಪೊಲೀಸ್ ಸಿಬ್ಬಂದಿ, ರಾಜ್ಯ ಅಗ್ನಿಶಾಮಕ ಇಲಾಖೆ, ಜಿಎಚ್‌ಎಂಸಿ ಅಧಿಕಾರಿಗಳು, ವಿಪತ್ತು ಸ್ಪಂದನಾ ಪಡೆ ಸಹ ಇಲ್ಲಿವೆ. ನಾವು ಈಗಾಗಲೇ ಸುತ್ತಮುತ್ತಲಿನ ಎಲ್ಲಾ ಕಟ್ಟಡಗಳನ್ನು ತೆರವು ಮಾಡಿದ್ದೇವೆ ಎಂದು ಹೆಚ್ಚುವರಿ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ)  ವಿಕ್ರಮ್ ಸಿಂಗ್ ಮಾನ್  ಹೇಳಿದ್ದಾರೆ.

ಸೆಂಟ್ರಲ್  ವಲಯದ ಡಿಸಿಪಿ ಪ್ರಕಾರ, ಐದು ಅಂತಸ್ತಿನ ಕಟ್ಟಡದ ನೆಲ ಮಹಡಿ ಮತ್ತು ಮೊದಲ ಮಹಡಿಯಲ್ಲಿ ಬೆಳಿಗ್ಗೆ 11:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನೆಲ ಮತ್ತು ಮೊದಲ ಮಹಡಿಯಲ್ಲಿ ಸ್ಪೋರ್ಟ್ಸ್ ವೇರ್ ಫ್ಯಾಬ್ರಿಕ್ ಶೋರೂಮ್ ಇತ್ತು.

ಘಟನೆಯ ವಿಡಿಯೊವು ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವುದನ್ನು ತೋರಿಸುತ್ತಿಗ್ಗು ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದು  ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈವರೆಗೆ ನಾಲ್ವರನ್ನು ರಕ್ಷಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. “ಮಾಲೀಕರ ಪ್ರಕಾರ, ಕೇವಲ ನಾಲ್ಕು ಜನರು ಸಿಕ್ಕಿಬಿದ್ದಿದ್ದಾರೆ. ಯಾರಾದರೂ ಒಳಗೆ ಉಳಿದಿದ್ದಾರೆಯೇ ಎಂದು ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Thu, 19 January 23