Telangana: ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಹೊತ್ತಿ ಉರಿದ 3 ಬೋಗಿಗಳು
ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ.
ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತೆಲಂಗಾಣದ ಯಾದಾದ್ರಿ ಭುವನಗಿರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹಾರಿದ್ದಾರೆ. ಹಾಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ರೈಲಿನ ಮೂರು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.
#WATCH | Telangana | Fire broke out on three coaches of Falaknuma Express between Bommaipally and Pagidipally, following which it was stopped. All passengers deboarded the train, no injuries reported. pic.twitter.com/QfOkvrOAST
— ANI (@ANI) July 7, 2023
S4, S5, S6 ಎಂಬ ಮೂರು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ರೈಲ್ವೆಯ ಸಿಪಿಆರ್ಒ ಸಿಎಚ್ ರಾಕೇಶ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಒಡಿಶಾದ ಬಾಲಸೋರ್ನಲ್ಲಿ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ನೂರಾರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ