Telangana: ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಹೊತ್ತಿ ಉರಿದ 3 ಬೋಗಿಗಳು

|

Updated on: Jul 07, 2023 | 1:37 PM

ಹೌರಾ-ಸಿಕಂದರಾಬಾದ್ ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ.

Telangana: ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಹೊತ್ತಿ ಉರಿದ 3 ಬೋಗಿಗಳು
ರೈಲು
Follow us on

ಹೌರಾ-ಸಿಕಂದರಾಬಾದ್ ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತೆಲಂಗಾಣದ ಯಾದಾದ್ರಿ ಭುವನಗಿರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹಾರಿದ್ದಾರೆ. ಹಾಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ರೈಲಿನ ಮೂರು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.

S4, S5, S6 ಎಂಬ ಮೂರು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ರೈಲ್ವೆಯ ಸಿಪಿಆರ್​ಒ ಸಿಎಚ್​ ರಾಕೇಶ್​ ಹೇಳಿದ್ದಾರೆ.
ಇತ್ತೀಚೆಗಷ್ಟೇ ಒಡಿಶಾದ ಬಾಲಸೋರ್​ನಲ್ಲಿ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ನೂರಾರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ