Ragging: ರ‍್ಯಾಗಿಂಗ್​ನಿಂದ ಬೇಸತ್ತು 4 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸಾವು

ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಹೈದರಾಬಾದ್​ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. 26 ವರ್ಷದ ಡಿ.ಪ್ರೀತಿ  ಕಾಲೇಜಿನಲ್ಲಿ ಹಿರಿಯರ ವಿದ್ಯಾರ್ಥಿಗಳ ಕಿರುಕುಳದಿಂದ (ರ‍್ಯಾಗಿಂಗ್) ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ.

Ragging: ರ‍್ಯಾಗಿಂಗ್​ನಿಂದ ಬೇಸತ್ತು 4 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸಾವು
ಡಿ ಪ್ರೀತಿ
Follow us
ನಯನಾ ರಾಜೀವ್
|

Updated on: Feb 27, 2023 | 11:48 AM

ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಹೈದರಾಬಾದ್​ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. 26 ವರ್ಷದ ಡಿ.ಪ್ರೀತಿ  ಕಾಲೇಜಿನಲ್ಲಿ ಹಿರಿಯರ ವಿದ್ಯಾರ್ಥಿಗಳ ಕಿರುಕುಳದಿಂದ (ರ‍್ಯಾಗಿಂಗ್) ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಎಂಜಿಎಂ ಆಸ್ಪತ್ರೆಯಲ್ಲಿ ಪ್ರೀತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಪ್ರೀತಿಯನ್ನು ಹೈದರಾಬಾದ್​ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪ್ರೀತಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೊಹಮ್ಮದ್ ಅಲಿ ಸೈಫ್ ಎಂಬ ಸ್ನಾತಕೋತ್ತರ ಎರಡನೇ ವರ್ಷದ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್​, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ . ವಿದ್ಯಾರ್ಥಿಯ ವಿರುದ್ಧ ಕಾಲೇಜು ಮತ್ತು ಆಸ್ಪತ್ರೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರೀತಿಯ ತಂದೆ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ತೆಲಂಗಾಣ ಸರ್ಕಾರವು ವಿದ್ಯಾರ್ಥಿನಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ರಾಜ್ಯ ಸಚಿವರಿಂದ 20 ಲಕ್ಷ ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಘೋಷಿಸಿದೆ.

ಸಂತ್ರಸ್ತೆಯ ತಂದೆ ಡಿ.ನರೇಂದ್ರ ಮಾತನಾಡಿ, ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರೆ, ರಾಜ್ಯ ಪಂಚಾಯತ್ ರಾಜ್ ಸಚಿವ ಇ.ದಯಾಕರ್ ರಾವ್ 20 ಲಕ್ಷ ರೂ. ಕುಟುಂಬದ ಒಬ್ಬರಿಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರ್ಕಾರಿ ನೌಕರಿ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ  ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್