ತೆಲಂಗಾಣ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ; ಆರೋಪಿ ಸೈಫ್ ಅಥವಾ ಸತೀಶನೇ ಆಗಿರಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ: ಕೆಟಿ ರಾಮರಾವ್
ಕಾಕತೀಯ ಮೆಡಿಕಲ್ ಕಾಲೇಜಿನಲ್ಲಿ(Kakatiya Medical College) ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿರುವ ಡಿ ಪ್ರೀತಿ, ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಅನುಭವಿಸಿದ ನಂತರ ಸ್ವಯಂ ಚುಚ್ಚುಮದ್ದು ಚುಚ್ಚಿಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್: ಸೀನಿಯರ್ ವಿದ್ಯಾರ್ಥಿ ರ‍್ಯಾಗಿಂಗ್ ಮಾಡಿದ್ದಕ್ಕೆ ಹೈದರಾಬಾದಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು(medical student) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತೆಲಂಗಾಣ ಸಚಿವ ಕೆಟಿ ರಾಮರಾವ್ (KT Rama Rao) ಭರವಸೆ ನೀಡಿದ್ದಾರೆ. ಕಾಕತೀಯ ಮೆಡಿಕಲ್ ಕಾಲೇಜಿನಲ್ಲಿ(Kakatiya Medical College) ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿರುವ ಡಿ ಪ್ರೀತಿ, ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಅನುಭವಿಸಿದ ನಂತರ ಸ್ವಯಂ ಚುಚ್ಚುಮದ್ದು ಚುಚ್ಚಿಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರೀತಿಯ ಅಪ್ಪನ ದೂರಿನ ಮೇರೆಗೆ, ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೊಹಮ್ಮದ್ ಅಲಿ ಸೈಫ್ ವಿರುದ್ಧ ರ‍್ಯಾಗಿಂಗ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕಿರುಕುಳದ ಆರೋಪದ ಮೇಲೆ ಬಂಧಿಸಿದ್ದಾರೆ.
ಇದನ್ನೂ ಓದಿ:ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಉಗ್ರನನ್ನು ಸದೆಬಡಿದ ಭದ್ರತಾ ಪಡೆ
ಹನಮಕೊಂಡ ಜಿಲ್ಲೆಯಲ್ಲಿ ಸಾರ್ವಜನಿಕ ಭಾಷಣದಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉಲ್ಲೇಖಿಸಿದ ರಾವ್, ಘಟನೆಗೆ ಕಾರಣರಾದ ಯಾರೇ ಆದರೂ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಸೈಫ್ ಆಗಲಿ, ಸತೀಶ್ ಆಗಲಿ ಅದಕ್ಕೆ ಕಾರಣರಾದವರನ್ನು ಬಿಡುವುದಿಲ್ಲ ಎಂದು ರಾವ್ ಹೇಳಿದ್ದಾರೆ.
ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ತೆಲಂಗಾಣ ಸರ್ಕಾರವು ವಿದ್ಯಾರ್ಥಿನಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ರಾಜ್ಯ ಸಚಿವರಿಂದ 20 ಲಕ್ಷ ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಘೋಷಿಸಿದೆ.
ಸಂತ್ರಸ್ತೆಯ ತಂದೆ ಡಿ.ನರೇಂದ್ರ ಮಾತನಾಡಿ, ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರೆ, ರಾಜ್ಯ ಪಂಚಾಯತ್ ರಾಜ್ ಸಚಿವ ಇ.ದಯಾಕರ್ ರಾವ್ 20 ಲಕ್ಷ ರೂ. ಕುಟುಂಬದ ಒಬ್ಬರಿಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರ್ಕಾರಿ ನೌಕರಿ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ