AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಸೆ 17 ನಿಜಾಮರ ಆಡಳಿತದಿಂದ ಮುಕ್ತಿ ಪಡೆದ ಹೈದರಾಬಾದ್ -ರಾಷ್ಟ್ರೀಯ ಏಕೀಕರಣ ದಿನಕ್ಕೆ ತೆಲಂಗಾಣ ಸರ್ಕಾರ ನಡೆಸಿರುವ ಸಿದ್ಧತೆಗಳು ಏನೇನು?

K Chandrashekar Rao: ಸೆಪ್ಟೆಂಬರ್ 17, 1948 ರಂದು, ನಿಜಾಮ್ ಆಳ್ವಿಕೆಯಲ್ಲಿದ್ದ ಹಿಂದಿನ ಹೈದರಾಬಾದ್ ರಾಜ್ಯವು ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡಿತು. ಆ ಐತಿಹಾಸಿಕ ದಿನವನ್ನು ಗುರುತಿಸಲು ಇಂದಿನ ಕೆಸಿಆರ್​ ಸರ್ಕಾರ ಸೆಪ್ಟೆಂಬರ್ 16 ರಿಂದ ಮೂರು ದಿನಗಳ ಆಚರಣೆಗಳನ್ನು ಆಯೋಜಿಸಲಿದೆ.

Telangana: ಸೆ 17 ನಿಜಾಮರ ಆಡಳಿತದಿಂದ ಮುಕ್ತಿ ಪಡೆದ ಹೈದರಾಬಾದ್ -ರಾಷ್ಟ್ರೀಯ ಏಕೀಕರಣ ದಿನಕ್ಕೆ ತೆಲಂಗಾಣ ಸರ್ಕಾರ ನಡೆಸಿರುವ ಸಿದ್ಧತೆಗಳು ಏನೇನು?
ಸೆ. 17 ನಿಜಾಮರ ಆಡಳಿತದಿಂದ ಮುಕ್ತಿ ಪಡೆದ ಹೈದರಾಬಾದ್
TV9 Web
| Updated By: ಸಾಧು ಶ್ರೀನಾಥ್​|

Updated on: Sep 14, 2022 | 6:06 AM

Share

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಲಂಗಾಣ ಸರ್ಕಾರವು ಸೆಪ್ಟೆಂಬರ್ 17 ಅನ್ನು ತೆಲಂಗಾಣ ರಾಷ್ಟ್ರೀಯ ಏಕೀಕರಣ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.

ತೆಲಂಗಾಣ ಸರ್ಕಾರವು ಸೆಪ್ಟೆಂಬರ್ 17 ಅನ್ನು “ತೆಲಂಗಾಣ ರಾಷ್ಟ್ರೀಯ ಏಕೀಕರಣ ದಿನ” ಎಂದು (Telangana National Integration Day) ಆಚರಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 3 ರ ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (Chief Minister K Chandrashekar Rao) ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

ಸೆಪ್ಟೆಂಬರ್ 17, 1948 ರಂದು, ನಿಜಾಮ್ ಆಳ್ವಿಕೆಯಲ್ಲಿದ್ದ ಹಿಂದಿನ ಹೈದರಾಬಾದ್ ರಾಜ್ಯವು (Hyderabad) ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡಿತು. ಆ ಐತಿಹಾಸಿಕ ದಿನವನ್ನು ಗುರುತಿಸಲು ಇಂದಿನ ಕೆಸಿಆರ್​ ಸರ್ಕಾರ ಸೆಪ್ಟೆಂಬರ್ 16 ರಿಂದ ಮೂರು ದಿನಗಳ ಆಚರಣೆಗಳನ್ನು ಆಯೋಜಿಸಲಿದೆ.

ಸೆಪ್ಟೆಂಬರ್ 16ರಂದು ತೆಲಂಗಾಣ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕೇಂದ್ರ ಕಚೇರಿಗಳಲ್ಲಿ ವಿದ್ಯಾರ್ಥಿಗಳು, ಯುವಕರು, ಪುರುಷ ಮತ್ತು ಮಹಿಳೆಯರ ಸಹಭಾಗಿತ್ವದಲ್ಲಿ ಬೃಹತ್ ಸಮಾವೇಶಗಳನ್ನು ಆಯೋಜಿಸಲಾಗುವುದು. ತೆಲಂಗಾಣ ಮುಖ್ಯಮಂತ್ರಿ ಕಚೇರಿ (Telangana CMO) ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಯ ಪ್ರಕಾರ, ಸೆಪ್ಟೆಂಬರ್ 17 ರಂದು ಮುಖ್ಯಮಂತ್ರಿ ಕೆಸಿಆರ್ ಸಾರ್ವಜನಿಕ ಉದ್ಯಾನದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಭಾಷಣ ಮಾಡಲಿದ್ದಾರೆ. ಅದೇ ದಿನ ವಿವಿಧ ಮಂತ್ರಿಗಳು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ತಮ್ಮ ತಮ್ಮ ಕೇಂದ್ರ ಸ್ಥಾನಗಳಲ್ಲಿ ಅದೇ ಮಾದರಿಯನ್ನು ಅನುಸರಿಸುತ್ತಾರೆ.

ಅದೇ ದಿನ ಕೆಸಿಆರ್ ಅವರು ಬಂಜಾರ ಆದಿವಾಸಿ ಭವನವನ್ನು ಉದ್ಘಾಟಿಸಲಿದ್ದಾರೆ. ಗುಸ್ಸಾಡಿ ಗೊಂಡು ಹಾಗೂ ಇತರೆ ಕಲಾ ಪ್ರಕಾರಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬೃಹತ್ ರ‍್ಯಾಲಿ ನಡೆಯಲಿದೆ. ಬಳಿಕ ಎನ್‌ಟಿಆರ್‌ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು, ಸಿಎಂ ಕೆಸಿಆರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 18 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವುದರ ಜೊತೆಗೆ ಕವಿಗಳು, ಕಲಾವಿದರು ಮತ್ತು ಇತರ ವ್ಯಕ್ತಿಗಳನ್ನು ಸನ್ಮಾನಿಸಲಾಗುವುದು ಎಂದು indiatoday ವರದಿ ಮಾಡಿದೆ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!