ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

 ಹಿರಿಯ ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತು, ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ತೆಲಂಗಾಣ ಪೊಲೀಸ್Image Credit source: NDTV
Follow us
|

Updated on: Feb 23, 2023 | 7:54 AM

ಹಿರಿಯ ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತು, ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿದ್ಯಾರ್ಥಿನಿಯನ್ನು ಸಿಬ್ಬಂದಿ ಮತ್ತು ವೈದ್ಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಅಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಮೌಖಿಕವಾಗಿ ಅಥವಾ ಇಂಟ್ರಾವೆನಸ್ ಮೂಲಕ ಯಾವುದೋ ಔಷಧ ನೀಡಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಆಕೆಯ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಕೆಯನ್ನು ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಆಕೆಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಹಿರಿಯ ವಿದ್ಯಾರ್ಥಿಯೊಬ್ಬ ತನ್ನ ಮಗಳಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಾರಂಗಲ್ ಪೊಲೀಸ್ ಆಯುಕ್ತ ಎ.ವಿ.ರಂಗನಾಥ್ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ವಿದ್ಯಾರ್ಥಿನಿ ವೈದ್ಯಕೀಯ ಕಾಲೇಜಿನ ಅನಸ್ತೇಷಿಯಾ ವಿಭಾಗದ ಎರಡನೇ ವರ್ಷದ (ಎಂಡಿ) ವಿದ್ಯಾರ್ಥಿನಿ, ವೈದ್ಯರು ಕೂಡ ಆಕೆಗೆ ಬೇಡದ ಕಾಮೆಂಟ್​ಗಳನ್ನು ಮಾಡುತ್ತಿದ್ದರು ಎನ್ನಲಾಗಿದೆ. ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ನ ಆನ್‌ಲೈನ್ ಗ್ರೂಪ್‌ಗಳಲ್ಲಿ ವಿದ್ಯಾರ್ಥಿನಿ ವಿರುದ್ಧ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾನೆ ಮತ್ತು ಕಿರುಕುಳವನ್ನು ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ವೈದ್ಯಕೀಯ ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಇದನ್ನು ಆತ್ಮಹತ್ಯೆ ಯತ್ನ ಎಂದು ಭಾವಿಸುತ್ತೇವೆ ಮತ್ತು ಹೆಚ್ಚಿನ ತನಿಖೆಯ ಆಧಾರದ ಮೇಲೆ ನಿಖರವಾದ ಕಾರಣಗಳು ತಿಳಿಯಲ್ಪಡುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆಕೆ ಚೇತರಿಸಿಕೊಂಡ ನಂತರ, ಪೊಲೀಸರು ಹೆಚ್ಚಿನ ವಿವರಗಳನ್ನು ಪಡೆಯುತ್ತಾರೆ ಮತ್ತು ಮುಂದಿನ ಕ್ರಮದ ಯೋಜನೆ ಅದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ