ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

 ಹಿರಿಯ ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತು, ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ತೆಲಂಗಾಣ ಪೊಲೀಸ್
Image Credit source: NDTV

Updated on: Feb 23, 2023 | 7:54 AM

ಹಿರಿಯ ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತು, ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿದ್ಯಾರ್ಥಿನಿಯನ್ನು ಸಿಬ್ಬಂದಿ ಮತ್ತು ವೈದ್ಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಅಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಮೌಖಿಕವಾಗಿ ಅಥವಾ ಇಂಟ್ರಾವೆನಸ್ ಮೂಲಕ ಯಾವುದೋ ಔಷಧ ನೀಡಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಆಕೆಯ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಕೆಯನ್ನು ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಆಕೆಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಹಿರಿಯ ವಿದ್ಯಾರ್ಥಿಯೊಬ್ಬ ತನ್ನ ಮಗಳಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಾರಂಗಲ್ ಪೊಲೀಸ್ ಆಯುಕ್ತ ಎ.ವಿ.ರಂಗನಾಥ್ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ವಿದ್ಯಾರ್ಥಿನಿ ವೈದ್ಯಕೀಯ ಕಾಲೇಜಿನ ಅನಸ್ತೇಷಿಯಾ ವಿಭಾಗದ ಎರಡನೇ ವರ್ಷದ (ಎಂಡಿ) ವಿದ್ಯಾರ್ಥಿನಿ, ವೈದ್ಯರು ಕೂಡ ಆಕೆಗೆ ಬೇಡದ ಕಾಮೆಂಟ್​ಗಳನ್ನು ಮಾಡುತ್ತಿದ್ದರು ಎನ್ನಲಾಗಿದೆ. ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ನ ಆನ್‌ಲೈನ್ ಗ್ರೂಪ್‌ಗಳಲ್ಲಿ ವಿದ್ಯಾರ್ಥಿನಿ ವಿರುದ್ಧ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾನೆ ಮತ್ತು ಕಿರುಕುಳವನ್ನು ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ವೈದ್ಯಕೀಯ ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಇದನ್ನು ಆತ್ಮಹತ್ಯೆ ಯತ್ನ ಎಂದು ಭಾವಿಸುತ್ತೇವೆ ಮತ್ತು ಹೆಚ್ಚಿನ ತನಿಖೆಯ ಆಧಾರದ ಮೇಲೆ ನಿಖರವಾದ ಕಾರಣಗಳು ತಿಳಿಯಲ್ಪಡುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆಕೆ ಚೇತರಿಸಿಕೊಂಡ ನಂತರ, ಪೊಲೀಸರು ಹೆಚ್ಚಿನ ವಿವರಗಳನ್ನು ಪಡೆಯುತ್ತಾರೆ ಮತ್ತು ಮುಂದಿನ ಕ್ರಮದ ಯೋಜನೆ ಅದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us