AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ, ಹೆಗಲ ಮೇಲೆ ಹೊತ್ತು ಓಡಿ ಪ್ರಾಣ ಉಳಿಸಿದ ಕಾನ್ಸ್ಟೇಬಲ್

ಮನೆಯಲ್ಲಿ ನಡೆದ ಸಣ್ಣ ಜಗಳದಿಂದ ಯುವಕನೊಬ್ಬ ಖಿನ್ನತೆಗೆ ಒಳಗಾಗಿ ಕೀಟನಾಶಕ ಕುಡಿದು ಪ್ರಜ್ಞೆ ತಪ್ಪಿ ಬಿದ್ದಿದ್ದ. ಆತನನ್ನು ಗಮನಿಸಿದ ಪೊಲೀಸ್ ಪೇದೆಯೊಬ್ಬರು ಆತನನ್ನು ಹೆಗಲ ಮೇಲೆ ಎತ್ತಿಕೊಂಡು ಎರಡು ಕಿಲೋಮೀಟರ್ ಓಡಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಪೊಲೀಸ್ ಪೇದೆ ಹಾಘೂ ಗೃಹರಕ್ಷಕ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ, ಹೆಗಲ ಮೇಲೆ ಹೊತ್ತು ಓಡಿ ಪ್ರಾಣ ಉಳಿಸಿದ ಕಾನ್ಸ್ಟೇಬಲ್
ಹೆಗಲ ಮೇಲೆ ಹೊತ್ತು ಓಡಿ ಯುವಕನ ಪ್ರಾಣ ಉಳಿಸಿದ ಕಾನ್ಸ್ಟೇಬಲ್
ಆಯೇಷಾ ಬಾನು
ಆಯೇಷಾ ಬಾನು|

Updated on: Feb 29, 2024 | 2:04 PM

Share

ಸಣ್ಣದೊಂದು ವಿಚಾರಕ್ಕೆ ಮನೆಯಲ್ಲಿ ನಡೆದ ಜಗಳದಿಂದ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ (Young Man) ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು ಸಮಯ ಪ್ರಜ್ಞೆ ಮೆರೆದ ಪೊಲೀಸ್ ಕಾನ್ಸ್ಟೇಬಲ್ (Police Constable) ಯುವಕನ ಜೀವ ಉಳಿಸಿದ್ದಾರೆ. ಕೀಟನಾಶಕ ಸೇವಿಸಿ ಗದ್ದೆಯಲ್ಲಿ ಬಿದ್ದಿದ್ದ ಯುವಕನನ್ನು ತನ್ನ ಹೆಗಲ ಮೇಲೆ ಹಾಕಿಕೊಂಡು ಓಡೋಡಿ ಬಂದು ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ತೆಲಂಗಾಣದ ಕರೀಂನಗರ ಜಿಲ್ಲೆಯ ವೀಣವಂಕ ಮಂಡಲದಲ್ಲಿ ಈ ಘಟನೆ ನಡೆದಿದೆ. ಜಿಲ್ಲೆಯ ಬೇಟಿಗಲ್ ಗ್ರಾಮದ ಸುರೇಶ್ ಎಂಬಾತ ಮನೆಯಲ್ಲಿ ಜಗಳ ಮಾಡಿಕೊಂಡು ಜಮೀನಿಗೆ ಬಂದು ಕೀಟನಾಶಕ ಕುಡಿದಿದ್ದ. ಜಮೀನಿನಲ್ಲಿ ಕೆಲಸ ಮಾಡುವವರು ಇದನ್ನು ಗಮನಿಸಿ 100ಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ಮಾಹಿತಿ ಸಿಕ್ಕ ಹತ್ತೇ ನಿಮಿಷಕ್ಕೆ ಪೊಲೀಸ್ ಪೇದೆ ಜೈಪಾಲ್ ಮತ್ತು ಗೃಹರಕ್ಷಕ ದಳದ ಕಿನ್ನೇರ ಸಂಪತ್ ಸ್ಥಳಕ್ಕೆ ಬಂದರು. ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನ್ನು ಕಂಡ ಪೊಲೀಸ್ ಕಾನ್ಸ್ಟೇಬಲ್ ಜೈಪಾಲ್, ಸುರೇಶ್‌ನನ್ನು ತಮ್ಮ ಭುಜದ ಮೇಲೆ ಎತ್ತಿಕೊಂಡು ಹೊಲದ ಗದ್ದೆಗಳ ನಡುವೆ ಸುಮಾರು ಎರಡು ಕಿಲೋಮೀಟರ್ ವರೆಗೆ ಓಡಿ ಗ್ರಾಮಕ್ಕೆ ಕರೆತಂದರು.

ಇದನ್ನೂ ಓದಿ: ಟಾಂಗಾ ಮೂಲಕ ಸಭೆಗೆ ಆಗಮಿಸಿದ ವಿಜಯಪುರ ಮೇಯರ್ ಮೆಹಜಬೀನ್ ಹೊರ್ತಿ, ಸರ್ಕಾರದ ವಿರುದ್ಧ ಅಸಮಾಧಾನ

ಬಳಿಕ ಕೂಡಲೇ ಕುಟುಂಬಸ್ಥರಿಗೆ ಮಾಹಿತಿ ನೀಡಿ ಆಟೋದಲ್ಲಿ ಜಮ್ಮಿಕುಂಟಾ ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾದರು. ಆದರೆ ಸುರೇಶನನ್ನು ಪರೀಕ್ಷಿಸಿದ ವೈದ್ಯರು ಆತನ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವಾರಂಗಲ್ ಎಂಜಿಎಂಗೆ ಸ್ಥಳಾಂತರಿಸಿದರು. ವೀಣವಂಕ ಎಸ್​ಐ ವಂಶಿಕೃಷ್ಣ ಅವರೊಂದಿಗೆ ಸಾಕಷ್ಟು ಪ್ರಯತ್ನದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುರೇಶ್ ಅವರ ಜೀವ ಉಳಿಸಿದ ಕಾನ್ ಸ್ಟೆಬಲ್ ಜೈಪಾಲ್ ಹಾಗೂ ಗೃಹರಕ್ಷಕ ದಳದ ಸಂಪತ್ ಅವರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ. ಪೊಲೀಸ್ ಪೇದೆ ಯುವಕನನ್ನು ರಕ್ಷಿಸುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ತವರಿಗೆ ಕಚ್ಚಿದ ಯುವಕ!

ಚಿಕ್ಕಬಳ್ಳಾಪುರದ ಎಂ.ಜಿ.ರಸ್ತೆಯಲ್ಲಿ ಕುಡಿದ ಮತ್ತಲ್ಲಿ ಯುವಕನೊಬ್ಬ ಹೈಡ್ರಾಮಾ ಮಾಡಿದ್ದಾನೆ. ಮದ್ಯದ ಮತ್ತಿನಲ್ಲಿ ಸಿಕ್ಕ ಸಿಕ್ಕವರಿಗೆ ಮನಬಂದಂತೆ ಕಚ್ಚಿದ್ದಾನೆ. ಮಹೇಶ್ ಎನ್ನುವ ಯುವಕ ಈ ರೀತಿ ಹುಚ್ಚಾಟ ಮೆರೆದಿದ್ದಾನೆ. ಪೊಲೀಸರಾದ ಶೇಖರ್, ಪೆಂಚಲಯ್ಯ, ಅಶ್ವತ್ಥ್ ಅನ್ನೋರು ಗಾಯಗೊಂಡಿದ್ದಾರೆ. ಕೊನೆಗೂ ಆರೋಪಿಯನ್ನು ಹಿಡಿದು ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ ಆಸ್ಪತ್ರೆಯಲ್ಲಿ ವೈದ್ಯರ ಜತೆಗೂ ಈತ ರಂಪಾಟ ಮಾಡಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ