ಮಾವೋವಾದಿ ವಿರೋಧಿ ಕಾರ್ಯಾಚರಣೆ: ಆಕಸ್ಮಿಕ ಗುಂಡು ಹಾರಿ ಪೊಲೀಸ್ ಅಧಿಕಾರಿ ಸಾವು
ಹೈದರಾಬಾದ್: ತೆಲಂಗಾಣದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ಸಾಗಿಸುತ್ತಿದ್ದ ಎಕೆ -47 ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಪೊಲೀಸ್ ಅಧಿಕಾರಿಗೆ ತಗುಲಿದ ಪರಿಣಾಮ ಆ ಪೊಲೀಸ್ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾವೋವಾದಿಗಳನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ ಸಮಯದಲ್ಲಿ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಚೆರ್ಲಾ ಮಂಡಲದ ಚೆನ್ನಪುರಂ ಅರಣ್ಯ ಪ್ರದೇಶದಲ್ಲಿ ಈ ಅಚಾತುರ್ಯ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಆರ್‌ಎಸ್‌ಐ) ಆದಿತ್ಯ ಸಾಯಿ ಕುಮಾರ್ (25) ಸ್ಥಳದಲ್ಲೇ […]
ಹೈದರಾಬಾದ್: ತೆಲಂಗಾಣದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ಸಾಗಿಸುತ್ತಿದ್ದ ಎಕೆ -47 ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಪೊಲೀಸ್ ಅಧಿಕಾರಿಗೆ ತಗುಲಿದ ಪರಿಣಾಮ ಆ ಪೊಲೀಸ್ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮಾವೋವಾದಿಗಳನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ ಸಮಯದಲ್ಲಿ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಚೆರ್ಲಾ ಮಂಡಲದ ಚೆನ್ನಪುರಂ ಅರಣ್ಯ ಪ್ರದೇಶದಲ್ಲಿ ಈ ಅಚಾತುರ್ಯ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಆರ್‌ಎಸ್‌ಐ) ಆದಿತ್ಯ ಸಾಯಿ ಕುಮಾರ್ (25) ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಾಚಲಂ ಆಸ್ಪತ್ರೆಗೆ ಸಾಗಿಸಲಾಗಿದೆ. ಆದಿತ್ಯ ಸಾಯಿ ಕುಮಾರ್ರವರು ಇತರ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ದತ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಕಳೆದೊಂದು ವಾರದಲ್ಲಿ ನಡೆದ ಎರಡನೇ ಕಾರ್ಯಾಚರಣೆ ಇದಾಗಿದೆ. ಗುಂಡಾಲ ಮಂಡಲದ ದೇವಲ್ಲಗುಡೆಮ್ ಗ್ರಾಮದ ಬಳಿ ಸೆಪ್ಟೆಂಬರ್ 3 ರಂದು ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದ ಮತ್ತು ಇನ್ನೊಬ್ಬ ತಪ್ಪಿಸಿಕೊಂಡಿದ್ದ.