ಮಾವೋವಾದಿ ವಿರೋಧಿ ಕಾರ್ಯಾಚರಣೆ: ಆಕಸ್ಮಿಕ ಗುಂಡು ಹಾರಿ ಪೊಲೀಸ್ ಅಧಿಕಾರಿ ಸಾವು

ಹೈದರಾಬಾದ್: ತೆಲಂಗಾಣದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ಸಾಗಿಸುತ್ತಿದ್ದ ಎಕೆ -47 ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಪೊಲೀಸ್ ಅಧಿಕಾರಿಗೆ ತಗುಲಿದ ಪರಿಣಾಮ ಆ ಪೊಲೀಸ್ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾವೋವಾದಿಗಳನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ ಸಮಯದಲ್ಲಿ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಚೆರ್ಲಾ ಮಂಡಲದ ಚೆನ್ನಪುರಂ ಅರಣ್ಯ ಪ್ರದೇಶದಲ್ಲಿ ಈ ಅಚಾತುರ್ಯ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ರಿಸರ್ವ್​ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಆರ್‌ಎಸ್‌ಐ) ಆದಿತ್ಯ ಸಾಯಿ ಕುಮಾರ್ (25) ಸ್ಥಳದಲ್ಲೇ […]

ಮಾವೋವಾದಿ ವಿರೋಧಿ ಕಾರ್ಯಾಚರಣೆ: ಆಕಸ್ಮಿಕ ಗುಂಡು ಹಾರಿ ಪೊಲೀಸ್ ಅಧಿಕಾರಿ ಸಾವು
ಸಾಧು ಶ್ರೀನಾಥ್​

Updated on: Sep 18, 2020 | 11:59 AM

ಹೈದರಾಬಾದ್: ತೆಲಂಗಾಣದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ಸಾಗಿಸುತ್ತಿದ್ದ ಎಕೆ -47 ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಪೊಲೀಸ್ ಅಧಿಕಾರಿಗೆ ತಗುಲಿದ ಪರಿಣಾಮ ಆ ಪೊಲೀಸ್ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮಾವೋವಾದಿಗಳನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ ಸಮಯದಲ್ಲಿ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಚೆರ್ಲಾ ಮಂಡಲದ ಚೆನ್ನಪುರಂ ಅರಣ್ಯ ಪ್ರದೇಶದಲ್ಲಿ ಈ ಅಚಾತುರ್ಯ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ರಿಸರ್ವ್​ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಆರ್‌ಎಸ್‌ಐ) ಆದಿತ್ಯ ಸಾಯಿ ಕುಮಾರ್ (25) ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಾಚಲಂ ಆಸ್ಪತ್ರೆಗೆ ಸಾಗಿಸಲಾಗಿದೆ. ಆದಿತ್ಯ ಸಾಯಿ ಕುಮಾರ್​ರವರು ಇತರ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ದತ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಕಳೆದೊಂದು ವಾರದಲ್ಲಿ ನಡೆದ ಎರಡನೇ ಕಾರ್ಯಾಚರಣೆ ಇದಾಗಿದೆ. ಗುಂಡಾಲ ಮಂಡಲದ ದೇವಲ್ಲಗುಡೆಮ್ ಗ್ರಾಮದ ಬಳಿ ಸೆಪ್ಟೆಂಬರ್ 3 ರಂದು ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದ ಮತ್ತು ಇನ್ನೊಬ್ಬ ತಪ್ಪಿಸಿಕೊಂಡಿದ್ದ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us