AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಶುದ್ಧೀಕರಣ ಆಚರಣೆಗೆ ಭಾರೀ ಆಕ್ರೋಶ: ಜೀರೋ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು

ತೆಲಂಗಾಣದಲ್ಲಿ ಸಾರ್ವಜನಿಕ ಸ್ಥಳ ಶುದ್ಧೀಕರಣದ ಹೆಸರಿನಲ್ಲಿ ನಡೆದ ತಾರತಮ್ಯದ ಆಚರಣೆಗೆ ಸಿದ್ದಿಪೇಟೆ ಪೊಲೀಸರು ಜೀರೋ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಗಂಭೀರ ಅಪರಾಧವಾದ ಈ ಕೃತ್ಯದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ವಿಧಿವಿಜ್ಞಾನ ಸಾಕ್ಷ್ಯ ಸಂಗ್ರಹಿಸಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಶುದ್ಧೀಕರಣ ಆಚರಣೆಗೆ ಭಾರೀ ಆಕ್ರೋಶ: ಜೀರೋ ಎಫ್‌ಐಆರ್ ದಾಖಲಿಸಿ  ತನಿಖೆ ಆರಂಭಿಸಿದ ಪೊಲೀಸರು
ತೆಲಂಗಾಣImage Credit source: The wire
ನಯನಾ ರಾಜೀವ್
|

Updated on: Sep 11, 2026 | 8:58 AM

Share

ಸಿದ್ದಿಪೇಟೆ, ಸೆಪ್ಟೆಂಬರ್ 11: ಸಾರ್ವಜನಿಕ ಸ್ಥಳ ಅಥವಾ ರಸ್ತೆಯನ್ನು ಅರಿಶಿನ ನೀರು ಹಾಗೂ ಸಗಣಿ ನೀರು ಸಿಂಪಡಿಸಿ ಶುದ್ಧೀಕರಣ ಮಾಡಿದ ಆಚರಣೆಯ ವಿರುದ್ಧ ಸಿದ್ದಿಪೇಟೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ದಾಖಲಾಗಿರುವ ದೂರುಗಳನ್ನು ‘ಜೀರೋ ಎಫ್‌ಐಆರ್’ (Zero FIR) ಮೂಲಕ ಸಿದ್ದಿಪೇಟೆಗೆ ವರ್ಗಾಯಿಸಿಕೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಇನ್ನಷ್ಟು ಕಠಿಣ ಪ್ರಕರಣಗಳನ್ನು ದಾಖಲಿಸಲು ಇಲಾಖೆ ಸಿದ್ಧತೆ ನಡೆಸಿದೆ.

ವಿಧಿವಿಜ್ಞಾನ ಸಾಕ್ಷ್ಯ ಸಂಗ್ರಹ: ಪ್ರಕರಣದಲ್ಲಿ ಸದ್ಯ ಯಾರನ್ನೂ ಅಧಿಕೃತವಾಗಿ ಬಂಧಿಸಿಲ್ಲವಾದರೂ, ರಸ್ತೆಗಳ ಮೇಲೆ ಸಿಂಪಡಿಸಲಾಗಿದ್ದ ಅರಿಶಿನದ ನೀರು, ಧಾರ್ಮಿಕ ಸಾಮಗ್ರಿಗಳು ಮತ್ತು ಮಣ್ಣಿನ ಮಾದರಿಗಳನ್ನು ವಿಧಿವಿಜ್ಞಾನ ತಜ್ಞರು ಸಂಗ್ರಹಿಸಿದ್ದು, ರಾಸಾಯನಿಕ ಪರೀಕ್ಷೆಗೆ ಕಳುಹಿಸಲಾಗಿದೆ.

ಜೀರೋ ಎಫ್‌ಐಆರ್‌ಗಳ ವರ್ಗಾವಣೆ: ಈ ಘಟನೆಯನ್ನು ಖಂಡಿಸಿ ತೆಲಂಗಾಣದ ವಿವಿಧ ಜಿಲ್ಲೆಗಳಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಆಕ್ರೋಶ ಹೊರಹಾಕಿ ದೂರು ದಾಖಲಿಸಿವೆ. ಆ ಎಲ್ಲ ದೂರುಗಳನ್ನು ಘಟನೆ ನಡೆದ ಸಿದ್ದಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ತಂದು ಒಂದೇ ಸೂರಿನಡಿ ಸಮಗ್ರ ತನಿಖೆ ನಡೆಸಲು ಉನ್ನತ ಪೊಲೀಸ್ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಆಧರಿಸಿ ಶುದ್ಧೀಕರಣ ಆಚರಣೆಯಲ್ಲಿ ಭಾಗಿಯಾದ ಪ್ರಮುಖರ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಬಂಧನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ವಿವಾದ: ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್ ಉತ್ತರಾಖಂಡಕ್ಕೆ ವರ್ಗಾವಣೆ

ಏನಿದು “ಶುದ್ಧೀಕರಣ” ವಿವಾದ?: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ದಲಿತ ಮುಖಂಡರು ಅಥವಾ ಸಾರ್ವಜನಿಕರು ಓಡಾಡಿದ ರಸ್ತೆ, ಸಭಾಂಗಣ ಅಥವಾ ದೇವಸ್ಥಾನಗಳನ್ನು ವಿರೋಧಿ ಗುಂಪುಗಳು ‘ಅಪವಿತ್ರವಾಯಿತು’ ಎಂದು ಹೇಳಿ ಅರಿಶಿನ, ಗೋಮೂತ್ರ ಅಥವಾ ಸಗಣಿ ನೀರು ಹಾಕಿ ಶುದ್ಧೀಕರಿಸುವ ಅನಿಷ್ಟ ಪದ್ಧತಿಯು ತೀವ್ರ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಕಾನೂನು ಕ್ರಮದ ತೂಗುಗತ್ತಿ: ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ (SC/ST Act) ಸಾರ್ವಜನಿಕ ಸ್ಥಳದಲ್ಲಿ ಇಂತಹ ತಾರತಮ್ಯ ಆಚರಣೆಗಳನ್ನು ನಡೆಸುವುದು ಜಾಮೀನು ರಹಿತ ಗಂಭೀರ ಅಪರಾಧವಾಗಿದೆ. ಸಾಮಾಜಿಕ ಸಾಮರಸ್ಯ ಕದಡುವ ಯತ್ನದ ಮೇಲೂ ಪ್ರತ್ಯೇಕ ಸೆಕ್ಷನ್‌ಗಳನ್ನು ಹಾಕಲು ಪೊಲೀಸರು ಸಜ್ಜಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ರ‍್ಯಾಲಿ ಮುಗಿದ ಬೆನ್ನಲ್ಲೇ, ಕೆಲವರು ಅವರು ಚಲಿಸಿದ ರಸ್ತೆ ಹಾಗೂ ಭಾಷಣ ಮಾಡಿದ ಜಾಗದಲ್ಲಿ ಅರಿಶಿನ ಮತ್ತು ಸಗಣಿ ನೀರು ಹಾಕಿ ಶುದ್ಧೀಕರಣ ಪೂಜೆ ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ