Telangana rain: ತೆಲಂಗಾಣದಲ್ಲಿ ಭಾರೀ ಮಳೆಗೆ 16 ಸಾವು; ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಸಿಎಂ ರೇವಂತ್ ರೆಡ್ಡಿ ಒತ್ತಾಯ

ಅದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಜಗ್ತಿಯಾಲ್, ಸಂಗಾರೆಡ್ಡಿ, ಮೇದಕ್, ಕಾಮರೆಡ್ಡಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 8.30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತೆಲಂಗಾಣದ ಹವಾಮಾನ ಕೇಂದ್ರ ತಿಳಿಸಿದೆ.ಈ ಅವಧಿಯಲ್ಲಿ ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ (30-40 kmph) ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ

Telangana rain: ತೆಲಂಗಾಣದಲ್ಲಿ ಭಾರೀ ಮಳೆಗೆ 16 ಸಾವು; ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಸಿಎಂ ರೇವಂತ್ ರೆಡ್ಡಿ ಒತ್ತಾಯ
ತೆಲಂಗಾಣ ಮಳೆ
Follow us
ರಶ್ಮಿ ಕಲ್ಲಕಟ್ಟ
|

Updated on: Sep 02, 2024 | 8:51 PM

ಹೈದರಾಬಾದ್ ಸೆಪ್ಟೆಂಬರ್ 02: ತೆಲಂಗಾಣದಲ್ಲಿ (Telangana) ಭಾರೀ ಮಳೆಗೆ ಇದುವರೆಗೆ ಕನಿಷ್ಠ 16 ಮಂದಿ ಸಾವಿಗೀಡಾಗಿದ್ದಾರೆ . ತೆಲಂಗಾಣ ಸರ್ಕಾರವು  ಮೃತಪಟ್ಟವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರವನ್ನು ಘೋಷಿಸಿದ್ದು ತಕ್ಷಣದ ಸಹಾಯಕ್ಕಾಗಿ ಕೇಂದ್ರವನ್ನು ಒತ್ತಾಯಿಸಿದೆ. ರೇವಂತ್ ರೆಡ್ಡಿ (Revanth Reddy) ನೇತೃತ್ವದ ತೆಲಂಗಾಣ ಸರ್ಕಾರವು ಪ್ರಾಥಮಿಕ ಅಂದಾಜಿನ ಪ್ರಕಾರ ₹ 5,000 ಕೋಟಿ ಹಾನಿಯಾಗಿದೆ ಎಂದು ಹೇಳಿದ್ದು ಕೇಂದ್ರದಿಂದ ₹ 2,000 ಕೋಟಿ ತಕ್ಷಣದ ನೆರವು ಕೋರಿದೆ. ಇದೇ ವೇಳೆ ತೆಲಂಗಾಣ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಘೋಷಿಸಬೇಕು ಎಂದು ರೆಡ್ಡಿ ಒತ್ತಾಯಿಸಿದರು.

ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕೃಷಿ ಬೆಳೆಗಳಿಗೆ ಹಾನಿಯಾಗಿದ್ದ, ಮಳೆಯಿಂದಾಗಿ ನೆರೆಯ ಆಂಧ್ರಪ್ರದೇಶದೊಂದಿಗೆ ರಾಜ್ಯದ ರೈಲು ಮತ್ತು ರಸ್ತೆ ಸಂಪರ್ಕವನ್ನು ಅಸ್ತವ್ಯಸ್ತಗೊಂಡಿದೆ.

ತೆಲಂಗಾಣ ಮಳೆ: ಇತ್ತೀಚಿನ ಅಪ್ಡೇಟ್ಸ್

  • ತೆಲಂಗಾಣದಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಆಸ್ತಿ ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಪ್ರವಾಹದಿಂದಾಗಿ ರಾಜ್ಯದಲ್ಲಿ ₹ 5,000 ಕೋಟಿ ಹಾನಿಯಾಗಿದೆ.
  • ಪ್ರಧಾನಿ ನರೇಂದ್ರ ಮೋದಿ ಅವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ರೆಡ್ಡಿ ಒತ್ತಾಯಿಸಿದ್ದಾರೆ ಮುಖ್ಯಮಂತ್ರಿಗಳು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕನ ನಡೆಸಿದ್ದು, ಈ ಕುರಿತು ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿದರು.
  • ಖಮ್ಮಂನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೃಹೋಪಯೋಗಿ ವಸ್ತುಗಳು ಕೊಚ್ಚಿಕೊಂಡು ಹೋಗಿವೆ.
  • ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಾರಿಗೆ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದ್ದು, ಪ್ರವಾಹದ ಮಧ್ಯೆ ಹಲವು ಮಾರ್ಗಗಳಲ್ಲಿ ರೈಲು ಹಳಿಗಳ ಮೇಲೆ ಜಲ್ಲಿಕಲ್ಲು ಕೊಚ್ಚಿ ಹೋಗಿದೆ. ರೈಲುಗಳು ವಿಳಂಬಗೊಂಡಿದ್ದು, ಪ್ರಸ್ತುತ ಮರುಸ್ಥಾಪನೆ ಕಾರ್ಯ ನಡೆಯುತ್ತಿದೆ. ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯ ಕೊಡದ ಬಳಿ ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ಹಲವಾರು ಲಾರಿಗಳು ಸಿಲುಕಿಕೊಂಡಿವೆ. ವಿಜಯವಾಡಕ್ಕೆ ಪ್ರಯಾಣಿಸುವವರು ನಾರ್ಕಟ್‌ಪಲ್ಲಿ-ಅದ್ದಂಕಿ ಹೆದ್ದಾರಿಯನ್ನು ಪರ್ಯಾಯವಾಗಿ ಬಳಸಬೇಕೆಂದು ಅಧಿಕಾರಿಗಳು ಒತ್ತಾಯಿಸಿದರು.
  • ಮಳೆಯಿಂದಾಗಿ ಮುನ್ನೇರು ನದಿ ಉಕ್ಕಿ ಹರಿಯುತ್ತಿದ್ದು, ಸಮೀಪದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ನೀರು ಇಳಿಮುಖವಾಗುತ್ತಿದ್ದಂತೆ ಮನೆಗಳಿಗೆ ನೀರು ನುಗ್ಗಿದ್ದು, ಗೃಹೋಪಯೋಗಿ ವಸ್ತುಗಳು ಕೊಚ್ಚಿ ಹೋಗಿವೆ ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆಗೆ ಬಿಜೆಪಿ 4ನೇ ಪಟ್ಟಿ ಬಿಡುಗಡೆ; ನೌಶೇರಾದಿಂದ ರವೀಂದರ್ ರೈನಾ ಸ್ಪರ್ಧೆ

ಅದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಜಗ್ತಿಯಾಲ್, ಸಂಗಾರೆಡ್ಡಿ, ಮೇದಕ್, ಕಾಮರೆಡ್ಡಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 8.30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತೆಲಂಗಾಣದ ಹವಾಮಾನ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ (30-40 kmph) ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಈ ಮುನ್ಸೂಚನೆಗಾಗಿ ಯೆಲ್ಲೋ ಎಚ್ಚರಿಕೆಯನ್ನು ನೀಡಿದೆ.

ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೇವಂತ್ ರೆಡ್ಡಿ ಅವರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ
ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ